Kannada NewsKarnataka NewsLatest
*BREAKING: ರಾಜ್ಯ ಸರ್ಕಾರದಿಂದ ಮತ್ವದ ಆದೇಶ: ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ*

ಪ್ರಗತಿವಾಹಿನಿ ಸುದ್ದಿ: ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಧರಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರು, ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಕಡ್ಡಾಯವಾಗಿ ಧರಿಸಬೇಕು. ಪುರುಷರು ನೌಕರರು ಖಾದಿ ಬಟ್ಟೆ ಪ್ಯಾಂಟ್, ಶರ್ಟ್, ಓವರ್ ಕೋಟ್ ಧರಿಸಬೇಕು. ಮಹಿಳೆಯರು ರೇಶ್ಮೆ ಸೀರೆ, ಚೂಡಿದಾರ್ ಧರಿಸುವಂತೆ ಸೂಚನೆ ನೀಡಲಾಗಿದೆ.
ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಖಾದಿ ಬಟ್ಟೆಗಳನ್ನು ನೌಕರರು ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಳಿಗೆಗಳಲ್ಲಿಯೇ ಖರೀದಿ ಮಾಡಬೇಕು. ಇದಕ್ಕೆ ಖಾದಿ ಗ್ರಾಮೋದ್ಯೋಗ ಮಂಡಳಿ ಈಗ ನೀಡುತ್ತಿರುವ ರಿಯಾಯಿತಿಗಿಂತ ಶೇ.5ರಷ್ಟು ಹೆಚ್ಚು ರಿಯಾಯಿತಿ ನೀಡಬೇಕು ಎಂದು ತೀರ್ಮಾನಿಸಲಾಗಿದೆ.


