Kannada NewsKarnataka NewsLatest
*ಮಾದಕ ವಸ್ತು ಜೈಲಿಗೆ ತರಲು ಬಿಡದಿದ್ದಕ್ಕೆ ಜೈಲು ಸಿಬ್ಬಂದಿಗಳ ಮೇಲೆ ಕೈದಿಗಳಿಂದ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಜೈಲಿನೊಳಗೆ ಮಾದಕ ವಸ್ತುಗಳನ್ನು ತರಲು ಬಿಡದಿದ್ದಕ್ಕೆ ಕೈದಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಕೈದಿಗಳಿಗೆ ಉಪಹಾರ ನೀಡುವ ವೇಳೆ ಕೆಲ ಕೈದಿಗಳು ತಮಗೆ ತಿಂಡಿ ಬೇಡ ತಂಬಾಕು, ಸಿಗರೇಟ್ ಕೊಡುವಂತೆ ಕೇಳಿದ್ದಾರೆ. ಮಾದಕ ವಸ್ತುಗಳಿಗೆ ಜೈಲಿನಲ್ಲಿ ಅವಕಾಶವಿಲ್ಲ. ಕೊಡಲ್ಲ ಎಂದು ಜೈಲಿನ ಸಿಬ್ಬಂದಿಗಳು ಹೇಳಿದ್ದಾರೆ.
ಈ ವೇಳೆ ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್ ಫಯಾನ್, ಕೌಶಿಕ್ ನಿಹಾಲ್ ಎಂಬ ಕೈದಿಗಳು ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಲ್ಲೆ ವಿಡಿಯೋ ಕೂಡ ವೈರಲ್ ಆಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




