
ಪ್ರಗತಿವಾಹಿನಿ ಸುದ್ದಿ, ಟೊರಾಂಟೊ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕುಖ್ಯಾತ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಮೃತಪಟ್ಟಿದ್ದಾನೆ.
ಹಲವು ಹಿಂಸಾಚಾರ ಮತ್ತು ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಖಾಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖಂಡ ನಿಜ್ಜರ್ ನನ್ನು ಭಾರತ ಸರ್ಕಾರ ಈ ಹಿಂದೆ ‘ಮೋಸ್ಟ್ ವಾಂಟೆಡ್ ಭಯೋತ್ಪಾದಕ’ ಎಂದು ಘೋಷಿಸಿತ್ತು. ಇತ್ತೀಚೆಗೆ, ಭಾರತ ಸರ್ಕಾರ ಬಿಡುಗಡೆ ಮಾಡಿದ್ದ ಭಯೋತ್ಪಾದಕರ ಪಟ್ಟಿಯಲ್ಲಿ ನಿಜ್ಜರ್‌ನ ಹೆಸರೂ ಕಾಣಿಸಿಕೊಂಡಿತ್ತು.
2022 ರಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ನಂತರ ನಿಜ್ಜರ್ ನ ಸೆರೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.
ಈ ಹಿಂದೆ, ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನಿಜ್ಜರ್ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು.