Belagavi NewsBelgaum NewsLatest

*ಖಾನಾಪುರ ಅಸೋಗಾ ರಸ್ತೆ ತಡೆಗೋಡೆ ಕುಸಿತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.‌ ಖಾನಾಪುರ-ಅಸೋಗಾ ರಸ್ತೆಯ ರೈಲು ನಿಲ್ದಾಣದ ಬಳಿ ನಡೆಯುತ್ತಿರುವ ಸಬ್‌ವೇ ಕಾಮಗಾರಿಯಿಂದಾಗಿ ತಡೆಗೋಡೆ ಕುಸಿದು ರಸ್ತೆ ಜಲಾವೃತಗೊಂಡಿದೆ. 

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ತಡೆಗೋಡೆ ಕುಸಿದು ರಸ್ತೆ ಜಲಾವೃತಗೊಂಡಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಮತ್ತೊಂದೆಡೆ, ಸಿಂಧನೂರು-ಹೆಮ್ಮಡಗಾ ರಸ್ತೆಯ ಮಂತುರ್ಗಾ ಸೇತುವೆ ಜಲಾವೃತಗೊಂಡ ಹಿನ್ನೆಲೆಯಲ್ಲಿ ಈ ಭಾಗದಲ್ಲೂ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಮಾನಸಪುರ, ಅಸೋಗಾ, ಭೋಸಗಾಳಿ ಮತ್ತು ಮಂತುರ್ಗಾ ಗ್ರಾಮಗಳ ಜನರಿಗೆ ಸಂಚಾರ ಸಂಕಷ್ಟ ಉಂಟಾಗುವ ಸಂಭವವಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button