Belagavi NewsBelgaum NewsKannada NewsKarnataka NewsNationalPolitics

*ಖಾನಾಪುರ ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:   ಬೆಳಗಾವಿ ವಾ.ಕ.ರ.ಸಾ ಸಂಸ್ಥೆ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಖಾನಾಪುರ ನೂತನ ಬಸ್ ನಿಲ್ದಾಣ ಉದ್ಘಾಟನೆ, ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರಧಾನ ಮತ್ತು ವಿವಿಧ ಯೋಜನೆಗಳ ಅನುಷ್ಠಾನ ಸಮಾರಂಭವನ್ನು ಜು.12 ರಂದು ಖಾನಾಪುರದ ಬಸ್ ನಿಲ್ದಾಣ ಆವರಣದಲ್ಲಿ ಆಯೋಜಿಸಲಾಗಿತ್ತು.

ಆದರೆ ಕಾರ್ಯಕ್ರಮವನ್ನು ಜುಲೈ 26ಕ್ಕೆ ಮುಂದೂಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉಪಸ್ಥಿತಿ ವಹಿಸುವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮಿಸುವರು. ಖಾನಾಪುರ ವಿಧಾನ ಸಭೆ ಶಾಸಕ ವಿಠಲ ಹಲಗೇಕರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ವಾ.ಕ.ರ.ಸಾ ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ ಅವರು ಕಾರ್ಯಕ್ರಮದ ಜ್ಯೋತಿ ಬೆಳಗಿಸುವರು. ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ವಿಶೇಷ ಆಮಂತ್ರಿತರಾಗಿ ಭಾಗವಹಿಸಲಿದ್ದಾರೆ.

ರಾಜ್ಯ ಸಭೆ ಸಂಸದ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕಸಭೆ ಸಂಸದೆ ಪ್ರಿಯಂಕಾ ಜಾರಕಿಹೊಳಿ, ಲೋಕಸಭೆ ಸಂಸದ ಜಗದೀಶ ಶೆಟ್ಟರ, ಉತ್ತರ ಕನ್ನಡ ಜಿಲ್ಲೆಯ ಲೋಕಸಭೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರುಗಳು ಅತಿಥಿಗಳಾಗಿ ಭಾಗವಹಿಸುವರು.

ಸರ್ಕಾರದ ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ, ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತ ದೀಪ ಚೋಳನ್, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟೆಣ್ಣವರ, ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕರಾದ ವಿಕಾಶ್ ಕುಮಾರ್ ವಿಕಾಶ್, ಜಿಲ್ಲಾಧಿಕಾರಿಗಳಾದ ಮೊಹಮ್ಮದ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಭೀಮಾಶಂಕರ ಗುಳೇದ, ವಾ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button