Belagavi NewsBelgaum NewsKannada NewsKarnataka News
*ಖಾನಾಪುರದಲ್ಲಿ ಭೀಕರ ಅಪಘಾತ: ರಜೆ ಮೇಲೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರಿಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಇಲ್ಲಿನ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದಲ್ಲಿ ಬೈಕ್ ಅಪಘಾತದಲ್ಲಿ ಯೋಧ ಮೃತಪಟ್ಟಿದ್ದಾರೆ. ಸೌರಭ್ ದ್ರೌಪದಕರ್ (28) ಮೃತ ಯೋಧ.
ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣತಪ್ಪಿದ ಬೈಕ್ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.