*ಅಭಿವೃದ್ಧಿ ಜೊತೆಗೆ ನಿರಂತರ ಜನಸಂಪರ್ಕ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತ ನಿರಂತರವಾಗಿ ಸಂಪರ್ಕದಲ್ಲಿದ್ದಾಗ ಮಾತ್ರ ಯಶಸ್ವಿ ಜನಪ್ರತಿನಿಧಿಗಳಾಗಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾದ ಮೇಲ್ಚಾವಣಿಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಭಾನುವಾರ ಉದ್ಘಾಟನೆ ನೆರವೇರಿಸಿದ ಅವರು, ವಿಧಾನ ಪರಿಷತ್ತಿನ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ದೇವಸ್ಥಾನಕ್ಕೆ ಅನುದಾನ ನೀಡಿದ್ದೇನೆ. ವಿಧಾನ ಪರಿಷತ್ತಿನ ಸದಸ್ಯನಾದ ನಂತರ ಜಿಲ್ಲೆಯ ಎಲ್ಲ ಭಾಗಗಳಿಗೂ ಅನುದಾನವನ್ನು ಹಂಚಲಾಗಿದೆ. ಸದಾ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಧ್ಯೇಯ ಎಂದು ಅವರು ತಿಳಿಸಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾದರಿಯಾಗಿ ಅಭಿವೃದ್ಧಿ ಮಾಡುತ್ತಿದ್ದಾರೆ. ಕ್ಷೇತ್ರದ ಜನರು ಅವರನ್ನು ಮನೆ ಮಗಳೆಂದೇ ಪ್ರೀತಿಸುತ್ತಾರೆ. ಇಡೀ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. 154 ದೇವಸ್ಥಾನಗಳ ನಿರ್ಮಾಣ ಮಾಡಲಾಗಿದೆ. ಇದ್ದರೆ ಇಂತಹ ಜನಪ್ರತಿನಿಧಿಗಳಿರಬೇಕು ಎಂದು ಕ್ಷೇತ್ರದ ಜನರು ಹೇಳುತ್ತಿದ್ದಾರೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ಈ ವೇಳೆ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು, ಮಹಿಳೆಯರು ಉಪಸ್ಥಿತರಿದ್ದರು.




