
ಪ್ರಗತಿವಾಹಿನಿ ಸುದ್ದಿ; ಖಾನಾಪುರ; ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ.
ಕಕ್ಕೇರಿ ನಿವಾಸಿ ಬಿಷ್ಟಪ್ಪ ಕೊನಸಕುಂಪಿ (42) ಕೊಲೆಯಾದ ದುರ್ದೈವಿ. ಕೌಟುಂಬಿಕ ದ್ವೇಷದ ಹಿನ್ನೆಲೆಯಲ್ಲಿ ಬಿಷ್ಟಪ್ಪ ಅವರ ಹೊಲದಲ್ಲಿ ಸಂಬಂಧಿಗಳಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯದ ಬಳಿಕ ಆರೋಪಿ ಗಳು ಪರಾರಿಯಾಗಿದ್ದಾರೆ.
ನಂದಗಡ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.