
ಪ್ರಗತಿವಾಹಿನಿ ಸುದ್ದಿ: ಫ್ಯಾಕ್ಟರಿ ಸಿಬ್ಬಂದಿ ಹಾಗೂ ಸ್ಥಳೀಯರ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಿದ್ಯಾನಗರದಲ್ಲಿ ನಡೆದಿದೆ.
ಆರುವರೆ ಎಕರೆ ಜಮೀನಿಗಾಗಿ ಸೆರಾಮಿಕ್ಸ್ ಫ್ಯಾಕ್ಟರಿ ಸಿಬ್ಬಂದಿ ಹಾಗೂ ಸ್ಥಳೀಯರ ನಡುವೆ ಗಲಾಟೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಎರಡು ಗುಂಪುಗಳು ಹೊಡೆದಾಡಿಕೊಂಡಿವೆ.
ಘಟನೆಯಲ್ಲಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.