ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಟೋಕಿಯೋ ಒಲಂಪಿಕ್ ನಲ್ಲಿ ಚಿನ್ನದ ಪದಕ ಗೆದ್ದ ಅಥ್ಲೀಟ್ ನೀರಜ್ ಚೋಪ್ರಾ ಸೇರಿದಂತೆ 11 ಕ್ರೀಡಾಪಟುಗಳು ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನೀರಜ್ ಚೋಪ್ರಾ, ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಪುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ, ಕುಸ್ತಿಪಟು ರವಿ ದಹಿಯಾ, ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್, ಹಾಕಿ ತಂಡದ ಗೋಲ್ ಕೀಪರ್ ಪಿ.ಆರ್.ಶ್ರೀಜೆಶ್, ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್, ಜಾವಲಿನ್ ಥ್ರೋ ಅಥ್ಲೀಟ್ ಸುಮಿತ್ ಆಂಟಿಲ್, ಶೂಟರ್ ಅವನಿ ಲೆಖ್ರಾ, ಬ್ಯಾಡ್ಮಿಂಟನ್ ಆಟಗಾರ ಕೃಷ್ಣನಗರ ಹಾಗೂ ಶೂಟರ್ ಎಂ.ನರ್ವಾಲ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇದೇ ಮೊದಲ ಬಾರಿಗೆ ಏಕಕಾಲದಲ್ಲಿ 11 ಆಟಗಾರರಿಗೆ ಖೇಲ್ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಕಳೆದ ವರ್ಷ 5 ಕ್ರೀಡಾಪಟುಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಕೇರಳದ ಬಳಿಕ ಕಾನ್ಪುರದ ವ್ಯಕ್ತಿಯಲ್ಲಿ ಝೀಕಾ ವೈರಸ್ ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ