Latest

ಭಾವನ ಮೇಲಿನ ಸೇಡಿಗಾಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ಭೂಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಸುಭಾಶಿಷ್ ಗುಪ್ತ ಬಂಧಿತ ಆರೋಪಿ. ಭಾವನ ಮೇಲಿನ ಸೇಡಿಗಾಗಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ ಬಾಂಬ್ ಇಡಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ. ಸುಮಾರು 2 ಗಂಟೆಗೂ ಹೆಚ್ಚು ಕಾಲ ಪೊಲೀಸರು, ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ಗೊತ್ತಾಗಿದೆ.

Related Articles

ಆರೋಪಿ ಸುಭಾಶಿಷ್ ಗುಪ್ತಾನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಅಕ್ಕನ ಗಂಡ ಭಾವನ ಮೇಲೆಸೇಡು ತೀರಿಸಿಕೊಳ್ಳಲೆಂದು ಹೀಗೆ ಮಾಡಿದ್ದಾಗಿ ತಿಳಿಸಿದ್ದಾನೆ. ತನ್ನ ಅಕ್ಕನಿಗೆ ಭಾವ ಮೋಸ ಮಾಡಿದ್ದ, ಆಕೆಗೆ ಡಿವೋರ್ಸ್ ನೀಡಿದ್ದ ಇದೇ ಕಾರಣಕ್ಕೆ ಆತನನ್ನು ಜೈಲಿಗೆ ಹಾಕಬೇಕು ಎಂದು ಆತನ ಹೆಸರಲ್ಲಿ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದೇನೆ ಎಂದು ಬಾಯ್ಬಿಟ್ಟಿದ್ದಾನೆ.
ಹೈಕಮಾಂಡ್ ಬುಲಾವ್; ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ

Home add -Advt

Related Articles

Back to top button