
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಹುಸಿ ಬಾಂಬ್ ಕರೆ ಮಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮುಂಜಾನೆ 3:30ರ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಂ ಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸ್, ಸಿಐ ಎಸ್ ಎಫ್ ಭದ್ರತಾ ಪಡೆಯಿಂದ ಕೆಲ ಕಾಲ ಏರ್ ಲೈನ್ ಗೇಟ್ ಗಳು ಸೇರಿದಂತೆ ಏರ್ ಪೋರ್ಟ್ ಟರ್ಮಿನಲ್ ನಲ್ಲಿ ತೀವ್ರ ತಪಾಸಣೆ ಮಾಡಲಾಗಿದೆ.
2 ಗಂಟೆ ಕಾಲ ತಪಾಸಣೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿಟ್ಟುಸಿರುಬಿಟ್ಟಿದ್ದಾರೆ. ಬೆದರಿಕೆ ಕರೆ ಮಾಡಿದಾನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ.
ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಧಾರಾಕಾರ ಮಳೆ: ಕೆಲವು ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲೆಗಳಿಗೆ ರಜೆ