Kannada NewsKarnataka NewsLatest

*ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಏರ್ ಪೋರ್ಟ್ ನ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿವೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ದುಷ್ಕರ್ಮಿಗಳು ಬೆದರಿಕೆಯೊಡ್ದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಇ-ಮೇಲ್ ಮೂಲಕ ವಿಮಾನ ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಸಂದೇಶ ರವಾನಿಸಿದ್ದಾರೆ. ಮೂರು ಆರ್ ಡಿಎಕ್ಸ್, ಐಇಡಿ ಬಳಸಿ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ ಹಕಿದ್ದಾರೆ.

Related Articles
Home add -Advt

ಈ ಮೇಲ್ ಸಂದೇಶ ಬರುತ್ತಿದ್ದಂತೆ ವಿಮಾನ ನಿಲ್ದಾಣ ಆಡಳಿತ ಮಂಡಳಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದೆ. ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಏರ್ ಪೋರ್ಟ್ ನಲ್ಲಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ವಿಮಾನ ನಿಲ್ದಾಣದಲ್ಲಿ ಪ್ರತಿ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ.

Related Articles

Back to top button