
ಪ್ರಗತಿವಾಹಿನಿ ಸುದ್ದಿ: ದಟ್ಟ ಮಂಜು, ಮೋಡ ಕವಿದ ವಾತಾವರಣ ಹಿನ್ನೆಲೆಯಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ 20ಕ್ಕೂ ಹೆಚ್ಚು ವಿಮಾನಗಳು ವಿಳಂಬಂವಾಗಿ ಹೊರಡಲಿವೆ.
ದಟ್ಟವಾದ ಮಂಜು ಕವಿದಿರುವುದರಿಂದ ರನ್ ವೇ ಕಾಣದ ಸ್ಥಿತಿ ನಿರ್ಮಾಣವಾಗಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ವಿಳಂಬವಾಗಿ ಹಾರಾಟ ನಡೆಸಲಿವೆ.
ವಿಮಾನ ನಿಲ್ದಾಣದ ಸುತ್ತಮುತ್ತ ದಟ್ಟ ಮಂಜು ಕವಿದ್ದ್ದು, ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಹಾರಾಟ ವಿಳಮ್ಬವಾಗಿದೆ ಎಂದು ಕೆಐಎ ಮಾಹಿತಿ ನೀಡಿದೆ.




