Film & EntertainmentKannada NewsKarnataka NewsLife StyleNational

*ಬಿಗ್ ಬಾಸ್ ಗೆ ಕಿಚ್ಚಾ ಸುಧೀಪ್ ಗುಡ್ ಬೈ*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಬಿಗ್ ಬಾಸ್ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ಬಹುದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ.

ಕಿಚ್ಚ ಸುದೀಪ್ ಬಿಗ್ ಬಾಸ್ ಗೆ ಗುಡ್ ಬೈ ಹೇಳುತ್ತಿದ್ದಾರೆ. ಈ ವರ್ಷವೇ ಬಿಗ್ ಬಾಸ್ ನಿರೂಪಣೆ ಕುರಿತಂತೆ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ಕಿಚ್ಚ ಸುದೀಪ್ ನಿರೂಪಣೆ ಮಾಡಲು ಒಪ್ಪುತ್ತಿಲ್ಲ. ಹೀಗಾಗಿ ಬೇರೆಯವರನ್ನು ಹಾಕಿಕೊಳ್ಳಲಿದ್ದಾರೆ ಎಂಬ ಚರ್ಚೆಗಳು ಕೇಳಿಬಂದಿದ್ದವು. ಆದರೆ ಈ ಸಲ ನಿರೂಪಣೆ ಮಾಡಲು ಒಪ್ಪಿದ್ದ ಇದೀಗ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳುತ್ತಿರುವುದನ್ನು ಸ್ವತಃ ಘೋಷಿಸಿದ್ದಾರೆ.

ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 11 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button