Film & Entertainment

*ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಯಾರಿಗೆಲ್ಲ ಪ್ರಶಸ್ತಿ?*

ಪ್ರಗತಿವಾಹಿನಿ ಸುದ್ದಿ: 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ, ನಿರೂಪಕಿ ಅನುಪಮಾ ಗೌಡ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಯಾಳ್ ಪದ್ಮನಾಭನ್ ನಿರ್ದೇಶನದ ತ್ರಯಂಬಕಂ ಚಿತ್ರದ ನಟನೆಗಾಗಿ ಅನುಪಮಾಗೆ ಈ ಪ್ರಶಸ್ತಿ ಲಭ್ಯವಾಗಿದೆ. ಎಸ್.ಕೃಷ್ಣ ನಿರ್ದೇಶನದ ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.

ಪಿ.ಶೇಷಾದ್ರಿ ನಿರ್ದೇಶನದ ಮೋಹನದಾಸ ಸಿನಿಮಾಗೆ ಅತ್ಯುತ್ತಮ ಚಿತ್ರ, ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮ್ಯಾಕ್ಟೆಲ್ ಚಿತ್ರ ಎರಡನೇ ಅತ್ಯುತ್ತಮ ಚಿತ್ರ, ಅರ್ಘ್ಯಂ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.

Home add -Advt

ಕನ್ನೇರಿ ಚಿತ್ರಕ್ಕೆ ಉತ್ತಮ ಸಾಮಾಜಿಕ ಕಾಳಜಿ ಸಿನಿಮಾ ಪ್ರಶಸ್ತಿ ನೀಡಲಾಗಿದೆ. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಇಂಡಿಯಾ ವರ್ಸಸ್ ಇಂಗ್ಲೆಂಡ್ ಸಿನಿಮಾಗೆ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರಪ್ರಶಸ್ತಿ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button