Latest

*BJP ಸೇರ್ಪಡೆಗೆ ಸಜ್ಜಾದ್ರಾ ಕಿಚ್ಚ ಸುದೀಪ್?; ಸಿಎಂ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಂಚನ ಸೃಷ್ಟಿಸಿದೆ. ಈ ಚರ್ಚೆ ನಡುವೆಯೇ ಇಂದು ಮಧ್ಯಾಹ್ನ ಸಿಎಂ ಬಸವರಾಜ್ ಬೊಮ್ಮಾಯಿ ನಡೆಸಲಿರುವ ಸುದ್ದಿಗೋಷ್ಠಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಎರಡು ಸುದ್ದಿಗೋಷ್ಠಿ ಕರೆದಿದ್ದು, ಮಧ್ಯಾಹ್ನ 1:30ಕ್ಕೆ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಒಂದು ಸುದ್ದೋಷ್ಠಿ ನಡೆಸಲಿದ್ದಾರೆ. ಅದಾದ ಒಂದು ಗಂಟೆ ಬಳಿಕ 2:30ಕ್ಕೆ ಮತ್ತೊಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮೊದಲ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಲ್ಲದೇ ಈ ವೇಳೆ ತಮ್ಮ ರಾಜಕೀಯ ಎಂಟ್ರಿ ಬಗ್ಗೆ ಸುದೀಪ್ ಮಾತನಾಡಲಿದ್ದಾರೆ ಎನ್ನಲಾಗಿದೆ. ಕಿಚ್ಚ ಸುದೀಪ್ ಮೂಲಕ ಯುವ ಸಮುದಾಯವನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದೆ.

ಇನ್ನೊಂದು ಮಾಹಿತಿ ಪ್ರಕರಾ ನಟ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗುತ್ತಿಲ್ಲ, ಬದಲಾಗಿ ಬಿಜೆಪಿ ಸ್ಟಾರ್ ಪ್ರಚಾರಕರಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಡೆಸಲಿರುವ ಸುದ್ದಿಗೋಷ್ಠಿಯತ್ತ ರಾಜ್ಯದ ಚಿತ್ತ ನೆಟ್ಟಿದೆ.

Home add -Advt
https://pragati.taskdun.com/kichcha-sudeepthreat-latterfir-file/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button