Latest

*ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇಬೇಕು ಒಳ್ಳೆತನ; ಸಿಎಂ ಬೊಮ್ಮಾಯಿ ಪರ ಮತಯಾಚಿಸಿದ ಕಿಚ್ಚ ಸುದೀಪ್*

ಪ್ರಗತಿವಾಹಿನಿ ಸುದ್ದಿ; ಶಿಗ್ಗಾಂವಿ: ಸಿಎಂ ಬಸವರಾಜ್ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮುಖ್ಯಮಂತ್ರಿಗಳ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸಿದರು.

ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಭರ್ಜರಿ ರೋಡ್ ಶೋ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ ಹಾಗೂ ನಟ ಕಿಚ್ಚ ಸುದೀಪ್ ಭಾಗಿಯಾಗಿದ್ದರು. ರೋಡ್ ಶೋ ಬಳಿಕ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕಿಚ್ಚ ಸುದೀಪ್, ಶಿಗ್ಗಾಂವಿ ಪುಣ್ಯ ಭೂಮಿಯಿಂದ ಪ್ರಚಾರ ಆರಂಭಿಸಿದ್ದು ಖುಷಿ ತಂದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದೇನೆ. ಇಲ್ಲಿನ ಜನರ ಆದರ, ಪ್ರೀತಿ ಕಂಡು ಸಂತೋಷವಾಯಿತು ಎಂದರು.

Home add -Advt

ಸಿಎಂ ಬೊಮ್ಮಾಯಿ ಅವರು ಅತ್ಯಂತ ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ನಾನೊಬ್ಬ ಭಾರತೀಯನಾಗಿ ಪ್ರಧಾನಿ ಮೋದಿಯವರ ಕೆಲಸಗಳನ್ನು ಮೆಚ್ಚುತ್ತೇನೆ. ಮುಖ್ಯಮಂತ್ರಿಯಾಗಿ ಕಡಿಮೆ ಸಮಯದಲ್ಲಿಯೇ ಒಳ್ಳೆಯ ಯೋಜನೆಗಳನ್ನು, ಅಭಿವೃದ್ಧಿ ಕೆಲಸಗಳನ್ನು ಬೊಮ್ಮಾಯಿ ಅವರು ಮಾಡಿದ್ದಾರೆ. ಇನ್ನಷ್ಟು ಉತ್ತಮ ಕೆಲಸಗಳನ್ನು ಮಾಡಲು ಅವರಿಗೆ ನಿವೆಲ್ಲರೂ ಮತ್ತೆ ಅವಕಾಶಗಳನ್ನು ನೀಡಬೇಕು ಎಂದು ಮನವಿ ಮಾಡಿದರು.

ನನ್ನ ಸಿನಿಮಾದಲ್ಲಿ ಒಂದು ಹಾಡಿದೆ. ಗೆದ್ದೇ ಗೆಲ್ಲುವೆ ಒಂದು ದಿನ ಗೆಲ್ಲಲೇ ಬೇಕೇ ಒಳ್ಳೆತನ ಎಂದು. ಹಾಗೇ ಸಿಎಂ ಬೊಮ್ಮಾಯಿ ಅವರಿಂದ ಇನ್ನಷ್ಟು ಒಳ್ಳೆಯ ಕೆಲಸಗಳ ಆಗಬೇಕು ಆ ನಿಟ್ಟಿನಲ್ಲಿ ನೀವೆಲ್ಲರೂ ಅವಕಾಶಗಳನ್ನು ನೀಡಬೇಕಿದೆ ಎಂದು ಹೇಳಿದರು.

https://pragati.taskdun.com/cm-basavaraj-bommainomination-fileshigavikiccha-sudeepj-p-nadda/


Related Articles

Back to top button