
ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಸರೋಜಾ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಸುದೀಪ್ ತಾಯಿ ಸರೋಜಾ ಅವರ ಮೃತದೇಹವನ್ನು ಜೆ.ಪಿ.ನಗರದ ನಿವಾಸಕ್ಕೆ ತರಲಾಗುತ್ತಿದ್ದು, ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ನಿನ್ನೆ ಬಿಗ್ ಬಾಸ್ ಶೂಟಿಂಗ್ ನ್ನೂ ಕೂಡ ತಕ್ಷಣ ಮುಗಿಸಿದ್ದರು. ವಾರದ ಪಂಚಾಯ್ತಿ ಕಾರ್ಯಕ್ರಮವೂ ಬೇಗನೇ ಮುಗಿದಿತ್ತು.
ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸರೋಜಾ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ