
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬರೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ನೋಡಿಕೊಳ್ಳುತ್ತಿದ್ದ ರಮೇಶ್ ಕಿಟ್ಟಿ ಎಂದು ಗುರುತಿಸಲಾಗಿದೆ. ಪ್ರಕರಣದ ಹಿಂದೆ ನಿರ್ದೇಶಕರೊಬ್ಬರ ಕೈವಾಡವೂ ಇದೆ ಎನ್ನಲಾಗಿದೆ.
ಸುದೀಪ್ ಚಾರಿಟೇಬಲ್ ಟ್ರಸ್ಟ್ ಮೇಲೆ 2 ಕೋಟಿಯಷ್ಟು ಹಣ ಹೂಡಿಕೆ ಮಾಡಿದ್ದ ರಮೇಶ್ ಕಿಟ್ಟಿಗೆ ಬಳಿಕ ಸುದೀಪ್ ಹಣ ವಾಪಸ್ ಕೊಟ್ಟಿಲ್ಲ ಎನ್ನಲಾಗಿದೆ. ಹಣಕಾಸಿನ ವೈಷಮ್ಯದ ಹಿನ್ನೆಲೆಯಲ್ಲಿ ಬೆದರಿಕೆ ಪತ್ರ ಬರೆದಿದ್ದಾಗಿ ವಿಚರಣೆ ವೇಳೆ ರಮೇಶ್ ಕಿಟ್ಟಿ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ.
ಬೆದರಿಕೆ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ