ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಕಿಚ್ಚ ಸುದೀಪ್ ಗೆ ಅನಾಮಧೇಯ ವ್ಯಕ್ತಿಯೋರ್ವ ಪತ್ರ ಬರೆದು, ಬೆದರಿಕೆ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಪತ್ರ ಬರೆದಿದ್ದಾನೆ ಎನ್ನಲಾಗಿದೆ.
ಸುದೀಪ್ ಅವರಿಗೆ ಪತ್ರ ಬರೆದಿರುವ ಅನಾಮಧೇಯ ವ್ಯಕ್ತಿ ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ಪತ್ರದಲ್ಲಿ ನಿಂದಿಸಲಾಗಿದೆ.
ಬೆದರಿಕೆ ಪತ್ರದ ಸಮೇತ ನಿರ್ಮಾಪಕ, ಸುದೀಪ್ ಆಪ್ತ ಜಾಕ್ ಮಂಜು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು, ಐಪಿಸಿ ಸೆಕ್ಷನ್ 504, 506 ಹಾಗೂ ಐಟಿ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ