Kannada NewsKarnataka NewsLatestPolitics

*ಶಾಸಕ ಹೆಚ್.ಡಿ.ರೇವಣ್ಣ ಬಂಧನ*

ಪ್ರಗತಿವಾಹಿನಿ ಸುದ್ದಿ: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

Home add -Advt

ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ರೇವಣ್ಣ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡರ ನಿವಾಸದಲ್ಲಿ ಇದ್ದಾರೆ ಎಂಬ ಮಾಹಿತಿ ಪಡೆದ ಎಸ್ ಐಟಿ ಅಧಿಕಾರಿಗಳ ತಂಡ ದೇವೇಗೌಡ ಪದ್ಮನಾಭನಗರ ನಿವಾಸಕ್ಕೆ ಆಗಮಿಸಿ, ರೇವಣ್ಣರಿಗಾಗಿ ಶೋಧ ನಡೆಸಿತು. ಈ ವೇಳೆ ದೇವೇಗೌಡರ ನಿವಾಸಲ್ಲಿಯೇ ರೇವಣ್ಣ ಎಸ್ ಐಟಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಾರೆ.

ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಹೆಚ್.ಡಿ.ರೇವನ್ಣ ಅವರನ್ನು ಬಂಧಿಸಿ, ಎಸ್ ಐಟಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ನಾಳೆ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

Related Articles

Back to top button