Belagavi NewsBelgaum NewsKannada NewsKarnataka NewsNational

ಬೆಳಗಾವಿ: ಮಕ್ಕಳ ಅಪಹರಣಕಾರರ ಮೇಲೆ ಗುಂಡು ಹಾರಿಸಿದ ಪೊಲೀಸರು; ಸಿನಿಮೀಯ ಮಾದರಿ ಘಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಣ ಮಾಡಿಕೊಂಡು ಪರಾರಿಯಾಗುತ್ತಿದ್ದ ಕಳ್ಳರ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮ ವಿಕ್ರಮಪುರ ಬಡಾವಣೆಯಲ್ಲಿ ನಡೆದಿದೆ.

ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದ ಖದೀಮರು ವಿಕ್ರಮಪುರ ಬಡಾವಣೆಯ ಸ್ವಸ್ತಿ ದೇಸಾಯಿ, ವಿಯೋಮ ದೇಸಾಯಿ ಎಂಬ ಮಕ್ಕಳನ್ನು ಕದ್ದು ಕೋಹಳ್ಳಿ ಸಿಂಧೂರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ತೆರಳುವಾಗ ಸ್ಥಳೀಯ ಪೊಲೀಸರು ಅಡ್ಡಗಟ್ಟಿದ್ದಾರೆ.

ಈ ವೇಳೆ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಎಸ್ಕೆಪ್ ಆಗಲು ಯತ್ನಿಸಿದ್ದಾರೆ, ಈ ವೇಳೆ ಆತ್ಮರಕ್ಷಣೆಗಾಗಿ ಕಳ್ಳರ ಕಾಲಿಗೆ ಗುಂಡು ಹಾರಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಆರೋಪಿಗಳನ್ನು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ್ ರವಿಕಿರಣ ಕಮಲಾಕರ, ಮಹಾರಾಷ್ಟ್ರದ ಕೊಲ್ಲಾಪೂರ ಮೂಲದ ಸಾಂಭಾ ಕಾಂಬ್ಳೆ ಬಿಹಾರ ಮೂಲದ ಶಾರುಖ ಶೇಖ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button