Kannada NewsKarnataka NewsNationalTravel
*ಬೈಕ್ ಗೆ ಡಿಕ್ಕಿ ಹೊಡೆದ ಕಿಲ್ಲರ್ ಬಿಎಂಟಿಸಿ ಬಸ್: ಇಬ್ಬರು ಸ್ಥಳದಲ್ಲೆ ಸಾವು*

ಪ್ರಗತಿವಾಹಿನಿ ಸುದ್ದಿ : ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆಯ ಮುರುಗೇಶ್ ಪಾಳ್ಯ ಸಿಗ್ನಲ್ ಬಳಿ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಹಾಗೂ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮುರಗೇಶ್ ಪಾಳ್ಯ ಸಿಗ್ನಲ್‌ನಲ್ಲಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ಸವಾರ ಯೂಟರ್ನ್ ತೆಗೆದುಕೊಳ್ಳುವಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಹಾಗೂ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ನಂತರ ಬಸ್ ಚಾಲಕ, ನಿರ್ವಾಹಕ ಪರಾರಿಯಾಗಿದ್ದು, ಸ್ಥಳಕ್ಕೆ ಜೀವನ್ ಭಿಮಾ ನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.