Kannada NewsLatest

ಜೂನ್ ತಿಂಗಳಲ್ಲಿ ಕಿಣೆ ಡ್ಯಾಂ ಚಾಲನೆ: ಸಚಿವ ರಮೇಶ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಾಂಬೋಟಿ ರಸ್ತೆ ಬಳಿಯ ಅಣೆಕಟ್ಟು ಡ್ಯಾಂ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಮತ್ತೊಮ್ಮೆ ತಾಂತ್ರಿಕವಾಗಿ ಪರಿಶೀಲಿಸಿದ ಬಳಿಕ ಜೂನ್ ತಿಂಗಳಲ್ಲಿ ಅಣೆಕಟ್ಟು ಉದ್ಘಾಟಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಾಂಬೋಟಿ ರಸ್ತೆಯ ಬಳಿಯಲ್ಲಿರುವ ಕಿಣೆ ಅಣೆಕಟ್ಟು ನಿರ್ಮಾಣ ಸ್ಥಳದಲ್ಲಿ ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಹಲವು ವರ್ಷಗಳಿಂದ ನಡೆಯುತ್ತಿರುವ ಕಿಣೆ ಡ್ಯಾಂ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಜಲಾಶಯದಲ್ಲಿ ನೀರು ಸಂಗ್ರಹಿಸುವುದರಿಂದ ಅನೇಕ ರೈತರಿಗೆ ಹಾಗೂ ಸ್ಥಳೀಯ ಗ್ರಾಮಗಳಿಗೆ ನೀರಿನ ಸೌಲಭ್ಯ ಲಭಿಸಲಿದೆ. ಇದರಿಂದ ಕೃಷಿ ಚಟವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಡ್ಯಾಂ ಬಳಿ ಬೃಂದಾವನ ಮಾದರಿ ಉದ್ಯಾನ ನಿರ್ಮಾಣ ಮಾಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಹೊರಗುತ್ತಿಗೆದಾರರ ನೇಮಕ ಮಾಡಿ ಸದ್ಯದಲ್ಲೇ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸಂಜಯ ಪಾಟೀಲ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button