Latest

ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮಹಿಳಾ ಕಾನ್ಸ್ ಟೇಬಲ್ ನೇಣಿಗೆ ಶರಣು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಮಹಿಳಾ ಕಾನ್ಸ್ ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕು ಚಿಕಗೊಲ್ಲರಹಟ್ಟಿಯಲ್ಲಿ ನಡೆದಿದೆ.

ನೇತ್ರಾ (27) ಆತ್ಮಹತ್ಯೆಗೆ ಶರಣಾದ ಕಾಮಾಕ್ಷಿಪಾಳ್ಯ ಠಾಣೆಯ ಮಹಿಳಾ ಸಂಚಾರಿ ಕಾನ್ಸ್ ಟೇಬಲ್. ನೇತ್ರಾ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ಕಾನ್ಸ್ ಟೇಬಲ್ ಮಂಜುನಾಥ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದ್ದು, ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

Home add -Advt

ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಕಾಕ ಜೋಕಾಲಿಗಾಗಿ ಕೊಲೆ ಪ್ರಕರಣ; 7 ಜನರಿಗೆ ಜೀವಾವಧಿ ಶಿಕ್ಷೆ

Related Articles

Back to top button