Kannada NewsKarnataka NewsLatest

ಕಿರಣ ಸುಬ್ಬರಾವ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿ ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಕಿರಣ ಸುಬ್ಬರಾವ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಅಲ್ಪಕಾಲದ ಅನಾರೋಗ್ಯದ ನಂತರ ಶುಕ್ರವಾರ ಬೆಳಗ್ಗೆ ಅವರು ಕೊನೆಯುಸಿರೆಳೆದರು.

ಮೂಲತಃ ಲೋಕೋಪಯೋಗಿ ಇಲಾಖೆಯ ಉದ್ಯೋಗಿಯಾಗಿರುವ ಕಿರಣ ಸುಬ್ಬರಾವ್, ನಿಯೋಜನೆಯ ಮೇರೆಗೆ ಸ್ಮಾರ್ಟ್ ಸಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದಕ್ಕೂ ಮೊದಲು ಬೆಳಗಾವಿ ಮಹಾನಗರ ಪಾಲಿಕೆಯಲ್ಲೂ ಹಲವು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು.

ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅವರು ಅಗಲಿದ್ದಾರೆ.

Home add -Advt

ಕಿರಣ ಸುಬ್ಬರಾವ್ ಅವರ ಅಂತ್ಯ ಸಂಸ್ಕಾರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಚಿದಂಬರ ನಗರ ಸ್ಮಶಾನ ಭೂಮಿಯಲ್ಲಿ ನಡೆಯಲಿದೆ.

ಕಿರಣ ಸುಬ್ಬರಾವ್ ನಿಧನಕ್ಕೆ ಪ್ರಗತಿವಾಹಿನಿ ತೀವ್ರ ಶೋಖ ವ್ಯಕ್ತಪಡಿಸುತ್ತದೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ ಅವರ ಕುಟುಂಬ ವರ್ಗಕ್ಕೆ ನೀಡಲೆಂದು ಪ್ರಗತಿವಾಹಿನಿ ಪ್ರಾರ್ಥಿಸುತ್ತದೆ.

 

(ಹೆಚ್ಚಿನ ಮಾಹಿತಿಗೆ ಮೊಬೈಲ್ 8197712235 ಸಂಪರ್ಕಿಸಬಹುದು)

Related Articles

Back to top button