ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ಸ್ಟಂಟ್ ವಿಡಿಯೋ ಮೂಲಕ ಭರ್ಜರಿಯಾಗಿ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಿರೀಟಿ ರೆಡ್ಡಿ ಅವರ ಸಿನಿಮಾ ಮುಹೂರ್ತ ನೆರವೇರಿತು. ಟಾಲಿವುಡ್ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಕ್ಲ್ಯಾಪ್ ಮಾಡುವ ಮೂಲಕ ಕಿರೀಟಿ ರೆಡ್ದಿಗೆ ಶುಭ ಹಾರೈಸಿದರು. ಇದೇ ವೇಳೆ ಕಿರೀಟಿ ರೆಡ್ಡಿ ಅವರ ಇಂಟ್ರೋಡಕ್ಷನ್ ಟೀಸರ್ ರಿಲೀಸ್ ಮಾಡಲಾಯಿತು.
ಕಿರೀಟಿ ರೆಡ್ಡಿ ಸ್ಟಂಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ರಾಜಮೌಳಿ, ಕಿರೀಟಿಗೆ ತುಂಬಾ ಟ್ಯಾಲೆಂಟ್ ಇದೆ. ಉತ್ತಮ ಟೀಂ ಸೇರಿದ್ದಾರೆ. ಖುಷಿಯ ವಿಚಾರ. ಇಡೀ ಚಿತ್ರತಂಡಕ್ಕೆ ಶುಭ ಹಾರೈಕೆಗಳು ಎಂದರು.
ವಾರಾಹಿ ಫಿಲ್ಮ್ ಪ್ರೊಡಕ್ಷನ್ ನಲ್ಲಿ ರಾಧಾ ಕೃಷ್ಣ ನಿರ್ದೇಶನದಲ್ಲಿ ಕಿರೀಟಿ ರೆಡ್ದಿ ನಾಯಕತ್ವದಲ್ಲಿ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದ್ದು, ಚಿತ್ರಕ್ಕೆ ಶ್ರೀಲೀಲಾ ನಾಯಕ ನಟಿಯಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್, ಬಾಲಿವುಡ್ ನಟಿ ಜೆನಿಲಿಯಾ ಕೂಡ ಅಭಿನಯಿಸುತಿರುವುದು ವಿಶೇಷ.
ಉಕ್ರೇನ್ ನಿಂದ ಬೆಳಗಾವಿಗೆ ವಾಪಸ್ ಆದ ಮೆಡಿಕಲ್ ವಿದ್ಯಾರ್ಥಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ