ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ” ಎಂದು ಕೃಷಿ ಇಲಾಖೆ ರಾಜ್ಯ ಸಚಿಚೆ ಶೋಭಾ ಕರಂದ್ಲಾಜೆ ಹೇಳಿದರು.
ಪ್ರಧಾನಮಂತ್ರಿಯವರ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಅವರು ಮಾತನಾಡಿದರು.
“ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು” ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.
“ಮೊದಲ ಬಾರಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬೆಳಗಾವಿಯ ಕಾರ್ಯಕ್ರಮದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ.
ರೋಡ್ ಶೋ ಮಾರ್ಗ ಇನ್ನೂ ಅಂತಿಮಗೊಂಡಿಲ್ಲ. ಎಸ್.ಪಿ.ಜಿ. ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು. ಪಿಎಂ-ಕಿಸಾನ್ ರೈತರ ಯೋಜನೆಯಾಗಿದೆ. ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ದೊಡ್ಡದು. ಆದ್ದರಿಂದ ರೈತ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲಾಗುವುದು” ಎಂದು ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದ ಸಿದ್ಧತೆ ಹಾಗೂ ವೇದಿಕೆ ನಿರ್ಮಾಣದ ಕುರಿತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿ, ನಾಲ್ಕೂ ದಿಕ್ಕುಗಳಲ್ಲಿ ಊಟ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
*ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ; ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ?*
https://pragati.taskdun.com/teachersuicidetrainprotestsangolli-rayanna-railway-station/
*ವಿಮಾನ ಆಯ್ತು ಈಗ KSRTC ಬಸ್ ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಸಹ ಪ್ರಯಾಣಿಕ*
https://pragati.taskdun.com/ksrtc-busurinationgirlmangalore-vijayapura-bus/
https://pragati.taskdun.com/youth-arrested-for-panni-beet-sales-in-belagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ