Kannada NewsKarnataka NewsLatest

ಕಿತ್ತೂರು ಉತ್ಸವ ಪೂರ್ವಭಾವಿ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪ್ರತಿ ವರ್ಷದಂತೆ ಅಕ್ಟೋಬರ್ 23ರಿಂದ ನಡೆಯಲಿರುವ ಕಿತ್ತೂರು ರಾಣಿ ಚನ್ನಮ್ಮ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಸೆ.30ರಂದು ಸಂಜೆ 4 ಗಂಟೆಗೆ ಕಿತ್ತೂರಿನ ಕಲ್ಮಠ ಕಾಲೇಜಿನ ಸಭಾವನದಲ್ಲಿ ಸಭೆ ನಡೆಯಲಿದೆ.

ಕೊರೆನಾ ಹಿನ್ನೆಲೆಯಲ್ಲಿ ಉತ್ಸವವನ್ನು ಯಾವರೀತಿಯಲ್ಲಿ ನಡೆಸಬೇಕು, ಸರಕಾರದಿಂದ ಎಷ್ಟು ಅನುದಾನ ಪಡೆಯಬೇಕು ಎನ್ನುವುದು ಸೇರಿದಂತೆ ಹಲವಾರು ವಿಷಯಗಳು ಚರ್ಚೆಗೆ ಬರಲಿದೆ.

ಶಾಸಕ ಮಹಾಂತೇಶ ದೊಡ್ಡಗೌಡರ್ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

Home add -Advt

ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕಿತ್ತೂರಿನಲ್ಲಿ ಆರಂಭಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಸಾರ್ವಜನಿಕರು ಸಚಿವರನ್ನು ಆಗ್ರಹಿಸುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button