ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು : ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿ ಚುಕ್ಕಿ, ವೀರರಾಣಿ
ಕಿತ್ತೂರು ಚನ್ನಮ್ಮಾಜಿಯ ಉತ್ಸವ ಅ.23 ರಿಂದ ಆರಂಭಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ ೧) ರಂದು 4 ಗಂಟೆಗೆ ಕಿತ್ತೂರ ಉತ್ಸವ ಆಚರಣೆ-2019 ರ ಪೂರ್ವಭಾವಿ ಸಭೆ ನಡೆಯುವುದು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಉಪಸ್ಥಿತಿಯಲ್ಲಿ ಸಭೆ ನಡೆಯುವುದು. ಉತ್ಸವಕ್ಕೆ 1 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಶಾಸಕ ಮಹಾಂತೇಶ ದೊಡ್ಡಗೌಡ ಹೇಳಿದ್ದಾರೆ.
ಕಲ್ಮಠ ಸಭಾ ಭವನದ ಬದಲಾಗಿ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪ (ಪೋಲಿಸ್ ಸ್ಟೇಶನ್ ಎದುರಿಗೆ)ದಲ್ಲಿ ಇಂದಿನ ಸಭೆ ಜರುಗಿಸಲಾಗುತ್ತಿದೆ. ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ ಪ್ರವೀಣ ಜೈನ್ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದು ಸಾರ್ವಜನಿಕರು ಈ ಸಭೆಗೆ ಆಗಮಿಸಿ ತಮ್ಮ ಅಭಿಪ್ರಾಯ ತಿಳಿಸಬೇಕೆಂದು ದೊಡ್ಡಗೌಡರ್ ಕೋರಿದ್ದಾರೆ.
ವಿಶೇಷವೆಂದರೆ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕುತ್ತೂರು ಉತ್ಸವದಲ್ಲಿ ಪಾಲ್ಗೊಂಡು ಕಿತ್ತೂರನ್ನು ತಾಲೂಕು ಎಂದು ಘೋಷಿಸಿದ್ದರು.
ಈ ಸುದ್ದಿಗಳನ್ನೂ ಓದಿ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ