Kannada NewsLatest

ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ.

ಅಂದು ಇಡೀ ದಿನ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರತಿ 3 ತಿಂಗಳಿಗೊಮ್ಮೆ ಕಾರ್ಯಕಾರಿಣಿ ಸಭೆ ನಡೆಯಬೇಕು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಸಭೆ ನಡೆದಿರಲಿಲ್ಲ. ಕಳೆದ ವಾರ ಮಂಗಳೂರಿನಲ್ಲಿ ಸಭೆ ನಡೆದಿತ್ತು.

Related Articles

ಬೆಳಗಾವಿ ಲೋಕಸಭಾ ಉಪಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕಾರಿಣಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ಲೋಕಸಭಾ ಚುನಾವಣೆ ಪೂರ್ವತಯಾರಿಯ ಭಾಗವಾಗಿ ಈ ಸಭೆಯನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ.

ಡಿಸೆಂಬರ್ 5ರಂದು ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಎಲ್ಲ ಪ್ರಮುಖ ಪದಾಧಿಕಾರಿಗಳು, ವಿವಿಧ ಜವಾಬ್ದಾರಿ ಹೊತ್ತವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕಾರಿಣಿ ನಡೆಸಲು ಸ್ಥಳ ಇನ್ನೂ ಅಂತಿಮವಾಗಿಲ್ಲ. ಕಾರ್ಯಕಾರಿಣಿ ಸಭೆ ಒಂದೇ ದಿನ ನಡೆಯುವುದೋ, ಎರಡು ದಿನ ಮಾಡಬೇಕೋ ಎನ್ನುವ ತೀರ್ಮಾನ ಕೂಡ ಇನ್ನೂ ಆಗಿಲ್ಲ.

Home add -Advt

ಇನ್ನು 2 ದಿವನಗಳಲ್ಲಿ ಬೆಳಗಾವಿಯ ಬಿಜೆಪಿ ಪ್ರಮುಖರು ಸಭೆ ಸೇರಿ ಪೂರ್ವ ಸಿದ್ಧತೆ ಕುರಿತು ಚರ್ಚಿಸುವ ಸಾಧ್ಯತೆ ಇದೆ.

2011 ಫೌಂಡ್ರಿ ಕ್ಲಸ್ಟರ್ ನಲ್ಲಿ ಮತ್ತು 2017ರಲ್ಲಿ ಧರ್ಮನಾಥ ಭವನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಈ ಬಾರಿ ಯಾವ ಸ್ಥಳ ಆಯ್ಕೆ ಮಾಡಲಾಗುತ್ತದೆ ಎನ್ನುವುದನ್ನು ಕಾಯ್ದು ನೋಡಬೇಕಿದೆ.

 

Related Articles

Back to top button