Belagavi NewsBelgaum NewsKannada NewsKarnataka NewsLatest

*ಭೀಕರ ಅಪಘಾತ; ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾಲೇಜು ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದ ವಿದ್ಯಾರ್ಥಿನಿಗೆ ಟಂಟಂ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ನಡೆದಿದೆ.

ಕಾವೇರಿ ಕಾಜಗಾರ (21) ಮೃತ ದುರ್ದೈವಿ. ಕಿತ್ತೂರು ತಾಲೂಕಿನ ಉಗರಖೋಡ ಗ್ರಾಮದವರು. ಕಾಲೇಜು ಮುಗಿಸಿಕೊಂಡು ಮಧ್ಯಾಹ್ನ ಮನೆಗೆ ವಾಪಾಸ್ ಆಗುತ್ತಿದ್ದಾಗ ರಸ್ತೆ ಬದಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಟಂಟಂ ವಾಹನ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯ ಮೇಲೆಯೇ ಹರಿದು ಹೋಗಿದೆ.

Home add -Advt

ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಟಂಟಂ ವಾಹನ ಚಾಲಕ ಅನಿಲ್ ಚಿವುಟಗುಂಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button