ಪ್ರಗತಿವಾಹಿನಿ ಸುದ್ದಿ; ಚನ್ನಮ್ಮನ ಕಿತ್ತೂರು: ತಾಲೂಕಿನ ಬೈಲೂರು ಗ್ರಾಮದಲ್ಲಿ ಗ್ರಾಮ ಒನ್ ನಾಗರೀಕ ಸೇವಾಕೇಂದ್ರಕ್ಕೆ ಬೆಳಗಾವಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವರ್ಚುವಲ್ ವೇದಿಕೆಯ ಮೂಲಕ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ ಗ್ರಾಮ ಒನ್ ಸೇವಾಕೇಂದ್ರಕ್ಕೆ ಗ್ರಾಮೀಣ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಗ್ರಾಮೀಣ ಭಾಗದ ರೈತರ ಅಲೆದಾಟ ತಪ್ಪಿಸಿ ತಮ್ಮ ಸ್ವಗ್ರಾಮದಲ್ಲಿಯೇ ಸರ್ಕಾರದ ಅನೇಕ ಯೋಜನೆಗಳ ಸದುಪಯೋಗ ಪಡೆಯುವುದರಿಂದ ಹಣ ಹಾಗೂ ಸಮಯದ ಉಳಿತಾಯ ಆಗುತ್ತಿದ್ದು ಇದೊಂದು ಉತ್ತಮ ಯೋಜನೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ತಹಶಿಲ್ದಾರ ಸೋಮಲಿಂಗಪ್ಪ ಹಾಲಗಿ, ಗ್ರೇಡ್ 2 ತಹಶೀಲ್ದಾರ ರವೀಂದ್ರ ನೇಸರಗಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರದ ಜಿಲ್ಲಾ ಸಂಯೋಜಕ ಅತೀಶ ದಾಲೆ, ಗ್ರಾಮ ಪಂಚಾಯತ ಅಧ್ಯಕ್ಷೆ ಬಿಬಿಜಾನ ಗಡಾದ, ಗ್ರಾಮ ಪಂಚಾಯತ ಅಭಿವೃಧ್ದಿ ಅಧಿಕಾರಿ ಜಯರಾಂ ಕಾದ್ರೊಳ್ಳಿ ಮತ್ತು ಗ್ರಾಮ ಪಂಚಾಯತ ಸದಸ್ಯರು ಗ್ರಾಮ ಒನ್ ಕೇಂದ್ರದ ಆಪರೇಟರ್ ಅನ್ನಪೂರ್ಣ ಶಂಕರ ಕಮ್ಮಾರ ಹಾಗೂ ಗ್ರಾಮಸ್ತರು ಇದ್ದರು.
ರಾಜಕಾರಣ ಬದಿಗಿಟ್ಟು ಅಭಿವೃದ್ಧಿ ಕೆಲಸದಲ್ಲಿ ನಿರತರಾಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ