Latest

*ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ KKRDB ಸಭೆ ನಡೆಯಿತು. ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳ ಹೈಲೈಟ್ಸ್;

ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸೂಚಿಸಿದರು

Home add -Advt

ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು

ಈಗ ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು

ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು

ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು

ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಲಾಯಿತು

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು

ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ

ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು ತೀರ್ಮಾನಿಸಲಾಯಿತು

ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು

ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್ ಡ್ಯಾಂಗಳಿಗೆ ಆಧ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು

ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ಗಮನದಲ್ಲಿ ಇಟ್ಟುಕೊಂಡು ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಕಾಣುವ ರೀತಿಯಲ್ಲಿ ಫಲಿತಾಂಶ ಬರುವಂತೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಲು ಸೂಚಿಸೊದರು

ಕಲ್ಯಾಣ ಕರ್ನಾಟಕ ಭಾಗದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳನ್ನು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು

ಯಾವ ಯಾವ ಕ್ಷೇತ್ರದಲ್ಲಿ ಹಿಂದುಳಿದಿದ್ದೇವೆಯೋ ಆ ಕ್ಷೇತ್ರಗಳಿಗೆ ಒತ್ತು ನೀಡಬೇಕು

ಹಾಸ್ಟೆಲುಗಳು, ಅಂಗನವಾಡಿ ಹಾಗೂ ವಸತಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು

ಲಭ್ಯ ಅನುದಾನವನ್ನು ಆದ್ಯತೆಯ ಮೇರೆಗೆ ವೆಚ್ಚ ಮಾಡಬೇಕು. ರಸ್ತೆ, ಕುಡಿಯುವ ನೀರು, ನೀರಾವರಿ ಮತ್ತಿತರ ಮೂಲಸೌಕರ್ಯಗಳಿಗೆ ಒತ್ತು ನೀಡಬೇಕು

ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಆಡಳಿತ ಇಲಾಖೆಗಳು ಮಂಜೂರಾತಿ ನೀಡುವಂತೆ ಸೂಚಿಸಿದರು

ಸಿ.ಎಸ್.ಆರ್. ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸೂಚಿಸಿದರು

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ತೀವ್ರ ಕೊರತೆ ಇದ್ದು, ಶೀಘ್ರವೇ ಹುದ್ದೆ ಭರ್ತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button