ಪ್ರಗತಿವಾಹಿನಿ ಸುದ್ದಿ: ಕೆ.ಕೆ.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿಯ ಹೊರವಲಯದ ನಂದಿಕೂರ ಕ್ರಾಸ್ ಬಳಿ ನಡೆದಿದೆ.
ಬೈಕ್ ಗೆ ಕೆ.ಕೆ.ಆರ್. ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿದೆ. ಅಪಘಾತದಲ್ಲಿ ಇಬ್ಬರು ಬೈಕ್ ಸವರರು ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.
ಕಲಬುರ್ಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ