Politics

*ಜಾತಿ ಗಣತಿ ವರದಿ: ವಿಶೇಷ ಸಚಿವ ಸಂಪುಟ ಸಭೆ ನಿಗದಿ*

ಪ್ರಗತಿವಾಹಿನಿ ಸುದ್ದಿ: ಜಾತಿ ಗಣತಿ ವರದಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಸಂಪುಟ ಸಭೆ ಕರೆಯಲು ತೀರ್ಮಾನಿಸಲಾಗಿದೆ.

ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಂಡಿಸಿದರು. ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಇಂದು ಚರ್ಚೆ ನಡೆಯಿತು.

Home add -Advt

ಇದೇ ವೇಳೆ ಜಾತಿ ಗಣತಿ ವರದಿ ಅನುಷ್ಠಾನ ವಿಚಾರವಾಗಿ ಏ.17ರಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಕರೆಯಲು ನಿಗದಿ ಮಾಡಲಾಗಿದೆ. ಸಭೆಯಲ್ಲಿ ವರದಿ ಅನುಷ್ಠಾನದ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Related Articles

Back to top button