*ಚಲಿಸುತ್ತಿದ್ದ KKRTC ಬಸ್ ನಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಸರ್ಕಾರಿ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮದರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕೆ.ಕೆ.ಆರ್.ಟಿ.ಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂದ ಬಸ್ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.Home add -Advt ಬಸ್ ನಲ್ಲಿ ಕೆಲವೇ ಸಮಯದಲ್ಲಿ ಬೆಂಕಿ ಆವರಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ. ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಹೆಚ್.ಡಿ.ಕುಮಾರಸ್ವಾಮಿ … Continue reading *ಚಲಿಸುತ್ತಿದ್ದ KKRTC ಬಸ್ ನಲ್ಲಿ ಬೆಂಕಿ ಅವಘಡ*
Copy and paste this URL into your WordPress site to embed
Copy and paste this code into your site to embed