Kannada NewsKarnataka NewsLatest

*KKRTC ಬಸ್-ಲಾರಿ ಭೀಕರ ಅಪಘಾತ; ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಸರ್ಕಾರಿ ಬಸ್ ಹಾಗೂ ಲಾರಿ ನಡುವೆಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ರಲ್ಲಿ ಸಂಭವಿಸಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಅಪಘಾತದ ತೀವ್ರತೆಗೆ ಬಸ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆದಾಖಲಿಸಲಾಗಿದೆ. ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್ (40), ಬೆಂಗಳೂರಿನ ಪಾರ್ವತಮ್ಮ(45) ಸೇರಿದಂತೆ ಒಟ್ಟು ಐವರು ಮೃತಪಟ್ಟಿದ್ದಾರೆ.

Related Articles

Back to top button