*ಕೆಎಲ್ಇ ಸಂಸ್ಥೆಯ 110ನೇ ಸಂಸ್ಥಾಪನಾ ದಿನಾಚರಣೆ*

ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದ ಕೆಎಲ್ಇ ಸಂಸ್ಥೆಯ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಸನ್ಮಾನ
ಪ್ರಗತಿವಾಹಿನಿ ಸುದ್ದಿ: ಶಿಕ್ಷಣ ವಂಚಿತ ಪ್ರದೇಶದಲ್ಲಿ ಸಪ್ತರ್ಷಿಗಳು ನೆಟ್ಟ ಸಸಿ ಇಂದು ಹೆಮ್ಮರವಾಗಿ ಬೆಳೆದು ನಿಂತಿರುವ ಕೆಎಲ್ಇ. ಸಂಸ್ಥೆ 110 ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದೆ.
ಈ ಸಂಸ್ಥಾಪನಾ ದಿನಾಚರಣೆಯು ಗುರುವಾರ 13 ನವೆಂಬರ್, 2025 ರಂದು ಮುಂಜಾನೆ 11.00 ಗಂಟೆಗೆ ಬೆಳಗಾವಿಯ ಜೆ ಎನ್ ಎಂಸಿಯ ಕೆಎಲ್ಇ ಸೆಂಟೀನರಿ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಲಿದೆ. ಹೈದರಾಬಾದ್ ನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಹ್ಯೂಮನ್ ಎಕ್ಸಲನ್ಸ್, ರಾಮಕೃಷ್ಣ ಮಠದ ಅಧ್ಯಕ್ಷರು ಹಾಗೂ ನಿರ್ದೇಶಕರು ಪೂಜ್ಯಶ್ರೀ ಸ್ವಾಮಿ ಬೋಧಮಯಾನಂದ ಮಹಾರಾಜ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗೋಕುಲ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕುಲಾಧಿಪತಿಗಳು, ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರು ಅವರು ಆಗಮಿಸಲಿದ್ದಾರೆ.
ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದ ಕೆಎಲ್ಇ ಸಂಸ್ಥೆಯ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಸನ್ಮಾನಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಕೆಎಲ್ಇ ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ಎಸ್. ಕೌಜಲಗಿಯವರು ವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕೆಎಲ್ಇ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಡಾ.ಬಿ.ಜಿ.ದೇಸಾಯಿ ತಿಳಿಸಿದ್ದಾರೆ.




