Kannada NewsLatest

*ಆಯುರ್ವೇದ ವೈದ್ಯಶಾಸ್ತ್ರದಲ್ಲಿ 3 ಚಿನ್ನದ ಪದಕ ಪಡೆದ ಡಾ. ಅನುಜಾ ಜನವಾಡೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಭಾರತೀಯ ಶಿಕ್ಷಣ ವ್ಯವಸ್ಥೆಯು ಪ್ರಾಚೀನ ಕಾಲದಿಂದಲೂ “ವಸುಧೈವ ಕುಟುಂಬಕಂ” (ವಿಶ್ವವೇ ಒಂದು ಕುಟುಂಬ) ತತ್ವಶಾಸ್ತ್ರದ ಮೇಲೆ ಕೇಂದ್ರೀಕರಿಸಿದ್ದು, ಆಧುನಿಕ ಜ್ಞಾನದ ಜೊತೆಗೆ ಮೌಲ್ಯಗಳನ್ನು ಸಂಯೋಜಿಸುವ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯ. ಅದು ಜಗತ್ತಿಗೆ ಹೊಸ ದಿಕ್ಕನ್ನು ನೀಡುವುದಲ್ಲದೆ ಇಡೀ ಮಾನವಕುಲಕ್ಕೆ ಒಳ್ಳೆಯದನ್ನು ಮಾಡುತ್ತದೆ ಎಂದು ಕರ್ನಾಟಕ ಗೌರಾವಾನ್ವಿತ ರಾಜ್ಯಪಾಲರಾದ ಥಾವರಚಂದ ಗೆಹ್ಲೊತ ಅವರಿಂದಿಲ್ಲಿ ಹೇಳಿದರು.

ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ), ಡೀಮ್ಡ್ ಟು ಬಿ ಯೂನಿವರ್ಸಿಟಿಯ 13ನೇ ಘಟಿಕೋತ್ಸವ ಭಾಷಣ ಮಾಡಿದ ಅವರು, ಗುಣಮಟ್ಟದ ಶಿಕ್ಷಣ ಮತ್ತು ನೈತಿಕ ಮೌಲ್ಯಗಳಿಂದ ಮಾತ್ರ ರಾಷ್ಟ್ರ ನಿರ್ಮಾಣ ಸಾಧ್ಯ. ನಮ್ಮ ದೇಶವು ಅಭಿವೃದ್ಧಿಯ ಪಥದಲ್ಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಹೊಸ ಶ್ರೇಷ್ಠ ಭಾರತವನ್ನು ರಚಿಸಲು ಬದ್ಧರಾಗಿದ್ದಾರೆ. ರಾಷ್ಟಿçÃಯ ಶಿಕ್ಷಣ ನೀತಿ ಮೂಲಕ ಗುಣಮಟ್ಟದ ಶಿಕ್ಷಣ ಮತ್ತು ನೈತಿಕ ಅಡಿಪಾಯವು ವೃತ್ತಿಜೀವನವನ್ನು ಯಶಸ್ವಿಯಾಗಿಸುತ್ತದೆ. ಜೀವನದ ಹಾದಿಯಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ಪದವಿಯನ್ನು ಪಡೆಯುವದೆಂದರೆ ಶಿಕ್ಷಣವನ್ನು ಪೂರ್ಣಗೊಳಿಸಿದಂತೆ. ಆದರೆ ಇದು ಜೀವನದ ಮುಂದಿನ ಹಂತದ ಆರಂಭವನ್ನು ಸಹ ಸೂಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ರಾಷ್ಟ್ರಪಿತ ಮಹಾತ್ಮ ಗಾಂದಿ ಅವರು ಉತ್ತಮ ಶಿಕ್ಷಣವು ಮನಸ್ಸು, ದೇಹ ಮತ್ತು ಆತ್ಮದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ನಂಬಿದ್ದರು. ನೀವು ಒಬ್ಬ ನಿಪುಣ ವಿಜ್ಞಾನಿ, ವ್ಯವಸ್ಥಾಪಕ ಅಥವಾ ಬರಹಗಾರರಾಗಿರಬಹುದು ಆದರೆ ನಿಮ್ಮ ಶಿಕ್ಷಣವು ಉಪಯುಕ್ತವಾಗಿರುತ್ತದೆ. ನೀವು ಅದನ್ನು ಮಾನವೀಯತೆಯ ಕಲ್ಯಾಣಕ್ಕಾಗಿ ಬಳಸಿದಾಗ ಮಾತ್ರ. ನಮ್ಮ ಜೀವನವು ಪ್ರಕೃತಿಯ ಮೇಲೆ ಅವಲಂಬಿತವಾಗಿದೆ, ಅದನ್ನು ಉಳಿಸುವುದು ಮತ್ತು ಸುಧಾರಿಸುವುದು ನಮ್ಮ ಕರ್ತವ್ಯ. ಪ್ರಕೃತಿಯನ್ನು ಹಸಿರಾಗಿಡೋಣ ಎಂದು ತಿಳಿಸಿದರು.

ಉತ್ತಮ ಶಿಕ್ಷಣಕ್ಕೆ ಅವಕಾಶ ನೀಡಿದರೆ ಪ್ರತಿಯೊಬ್ಬರೂ ಅವರ ಕನಸುಗಳನ್ನು ನನಸಾಗಿಸಬಹುದು ಎಂಬ ಉದ್ದೇಶವನ್ನಿಟ್ಟ್ಟುಕೊಂಡು, ಕೆಎಲ್‌ಇ ಸಂಸ್ಥೆಯು ಗುಣಮಟ್ಟದ ಶಿಕ್ಷಣವನ್ನು ನೀಡಲು ಪ್ರಯತ್ನಿಸುತ್ತಿದೆ. ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತಿರುವದು ಇಲ್ಲಿಯ ಶಿಕ್ಷಣದ ಗುಣಮಟ್ಟ ಮತ್ತು ಪ್ರಸ್ತುತತೆಯನ್ನು ಪ್ರತಿಬಿಂಬಿಸುತ್ತದೆ. 1916 ರಲ್ಲಿ ಸಪ್ತಋಷಿಗಳಿಂದ ಸ್ಥಾಪಿತವಾದ ಸಂಸ್ಥೆಯನ್ನು ಕಳೆದ 40 ವರ್ಷಗಳಲ್ಲಿ ಸಂಸ್ಥೆಯ ಕರ‍್ಯಾಧ್ಯಕ್ಷರು ಹಾಗೂ ಕಾಹೆರ ಕುಲಪತಿ ಡಾ. ಪ್ರಭಾಕರ ಕೋರೆಯವರ ಕ್ರಿಯಾಶೀಲ ನಾಯಕತ್ವದಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ವಿಶಿಷ್ಟ ಗುರುತನ್ನು ಕೆತ್ತಿದೆ. ಇದು ಸಾಮೂಹಿಕ ಪ್ರಯತ್ನದ ಫಲ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿತಿನ್ ಗಂಗಾನೆ, ವರದಿಯಲ್ಲಿ ವಾಚಿಸುತ್ತ ಜೆಎನ್ ವೈದ್ಯಕೀಯ ಮಹಾವಿದ್ಯಾಲಯವು ಸುಧಾರಿತ ಸಿಮ್ಯುಲೇಶನ್ ತರಬೇತಿ ಕೇಂದ್ರ ಹೊಂದಿದ್ದು, ದೇಶದಲ್ಲೇ ಅತ್ಯುತ್ತಮವಾಗಿದೆ ಅಲ್ಲದೆ ಉತ್ತರ ಕರ್ನಾಟಕದಲ್ಲಿ ಪ್ರಥಮ. ಅತ್ಯಾಧುನಿಕ ಸಿಮ್ಯುಲೇಟರ್‌ಗಳು ವಿದ್ಯಾರ್ಥಿಗಳಿಗೆ ನೈಜ-ಸಮಯದ ಕಾರ್ಯಾಚರಣೆಯ ಅನುಭವಗಳನ್ನು ನೀಡುತ್ತವೆ. ರೋಗಿಗಳ ಸುರಕ್ಷತೆಗೆ ಧಕ್ಕೆಯಾಗದಂತೆ ಅವರ ಕೌಶಲ್ಯಗಳನ್ನು ಹೆಚ್ಚಿಸುತ್ತವೆ. ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮುಕ್ತ ದೂರಶಿಕ್ಷಣದಲ್ಲಿ ತೊಡಗಲಿದೆ. ನಿಯಮಿತ ಶೈಕ್ಷಣಿಕ ಅವಧಿಗಳ ಹೊರತಾಗಿ, ವೃತ್ತಿಪರತೆ, ನೈತಿಕತೆ, ಸಂವಹನ ಕೌಶಲ್ಯಗಳು, ನಾಯಕತ್ವ ಕೌಶಲ್ಯಗಳು ಮತ್ತು ಸಾಮರ್ಥ್ಯ-ನಿರ್ಮಾಣ, ಯೋಗಾ ಕೋರ್ಸ್ ಅಳವಡಿಸಲಾಗುತ್ತಿದೆ ಎಂದು ಹೇಳಿದರು.

ಕಾಹೆರ ಡಿಜಿಟಲ್ ಆಧಾರಿತ ಪೇಪರ್‌ಲೆಸ್ ಪರೀಕ್ಷಾ ವ್ಯವಸ್ಥೆಯನ್ನು ಮೇಲ್ರ‍್ಜೆಗೇರಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳನ್ನು ಇ-ಪ್ಯಾಡ್‌ಗಳಲ್ಲಿ (ಟ್ಯಾಬ್ಲೆಟ್‌ಗಳು) ಸುರಕ್ಷಿತ ಆನ್‌ಲೈನ್ ಪೋರ್ಟಲ್‌ನಲ್ಲಿ ಬರೆಯುತ್ತಾರೆ. ಅಂತರಾಷ್ಟ್ರೀಯ ಸಂಶೋಧನಾ ಸಂಸ್ಥೆಗಳೊAದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ವಿಶ್ವವಿದ್ಯಾನಿಲಯವು ಸಮುದಾಯ ಆರೋಗ್ಯದ ಕುರಿತು ಸುಮಾರು 60 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಸುಮಾರು 165 ಕೋ.ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ಕೆಎಲ್‌ಇ ಸಂಸ್ಥೆಯ ಕ್ಯಾನ್ಸರ ಆಸ್ಪತ್ರೆಯನ್ನು ನರ‍್ಮಿಸುತ್ತಿದೆ. ಈಗಾಗಲೇ ಅತ್ಯಾಧುನಿಕ ರೇಡಿಯೋ ಥೆರಪಿ ಆಂಕೊಲಾಜಿ ಸೇವೆಯನ್ನು ಪ್ರಾರಂಭಿಸಲಾಗಿದೆ. ಸತತ ಮೂರನೇ ಬಾರಿಗೆ ನ್ಯಾಕ್ ಸಂಸ್ಥೆಯಿAದ ಎ+ ಗ್ರೇಡ್‌ನೊಂದಿಗೆ ಯಶಸ್ವಿಯಾಗಿ ಮರುಮಾನ್ಯತೆ ಪಡೆದಿದೆ ಎಂದು ಹೇಳಿದರು.

ನಿಪ್ಪಾಣಿ ತಾಲೂಕಿನ ಬೆನ್ನಾಡಿ ಗ್ರಾಮದ ಕೃಷಿ ಕುಟುಂಬದ ಡಾ. ಅನುಜಾ ಜನವಾಡೆ ಅವರು ಆಯುರ್ವೇದ ವೈದ್ಯಶಾಸ್ತ್ರದಲ್ಲಿ (ಬಿಎಎಂಎಸ್) 3 ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಒಟ್ಟು 23 ಚಿನ್ನದ ಪದಕಗಳಲ್ಲಿ 19 ವೈದ್ಯ ವಿದ್ಯಾರ್ಥಿನಿಯರೇ ಪಡೆದುಕೊಂಡಿದ್ದಾರೆ. 7 ಪಿಎಚ್‌ಡಿ, 9 ಪೋಸ್ಟ್ ಡಾಕ್ಟರಲ್ , 23 ಚಿನ್ನದ ಪದಕಗಳು ಸೇರಿದಂತೆ ಆರೋಗ್ಯ ವಿಜ್ಞಾನದ ವಿವಿಧ ವಿಭಾಗಗಳಲ್ಲಿ ಒಟ್ಟು 1451 ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರಮಾಣ ಪತ್ರ ನೀಡಲಾಯಿತು. 445 ಸ್ನಾತಕೋತ್ತರ ಪದವಿ, 976 ಪದವಿ, 02 ಸ್ನಾತಕೋತ್ತರ ಡಿಪ್ಲೊಮಾ, 7 ಫೆಲೋಶಿಪ್ ಮತ್ತು ಪ್ರಮಾಣ ಪತ್ರ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪ್ರಭಾಕರ ಕೋರೆ ವಹಿಸಿದ್ದರು. ಕುಲಸಚಿವ ಡಾ.ವಿ.ಎ.ಕೋಠಿವಾಲೆ, ಪರೀಕ್ಷಾ ನಿಯಂತ್ರಕರಾದ ಡಾ. ಜ್ಯೋತಿ ಎಂ. ನಾಗಮೋತಿ ಸೇರಿದಂತೆ, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

https://pragati.taskdun.com/dcm-d-k-shivakumarorderofficers-suspendedhosakerehalli-lake-road/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button