Latest

ಕೆಎಲ್‌ಇ ಆಯುರ್ ಔಷಧಾಲಯಕ್ಕೆ ಡಾ.ಪ್ರಭಾಕರ ಕೋರೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಬಿ ಎಂ ಕಂಕಣವಾಡಿ ಆಯುರ್ವೇದ ಪಾರ‍್ಮದಲ್ಲಿ ಕಳೆದ 87 ವರ್ಷದಿಂದ ಆಯುರ್ವೇದ ಔಷಧಿ ಹಾಗೂ ಸಾಂಪ್ರದಾಯಿಕ ಆಯುರ್ವೇದ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಒಳ್ಳೆಯ ಗುಣಮಟ್ಟದ ಆಯುರ್ ಉತ್ಪನ್ನಗಳನ್ನು ಜನರಿಗೆ ತಲುಪಿಸಲು ಕ್ರಮಕೈಕೊಂಡಿದ್ದು, ದೇಶಾದ್ಯಂತ ಕೆಎಲ್‌ಇ ಆಯುರ್ ಔಷಧಾಲಯಗಳನ್ನು ತೆರೆಯಲಾಗುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ತಿಳಿಸಿದರು.

ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಆವರಣದಲ್ಲಿ ಕೆಎಲ್‌ಇ ಆಯುರ್ ಔಷಧಾಲಯ (ಆಯುರ್ವೇದಿಕ್ ಫಾರ‍್ಮಸಿ)ವನ್ನು ದಿ. 2 ಸೆಪ್ಟಂಬರ 2022ರಂದು ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು, ಅಲೋಪಥಿಗೆ ಅತೀ ಹೆಚ್ಚು ಪ್ರಾಮುಖ್ಯತೆ ನೀಡಿ ಭಾರತೀಯ ಸಾಂಪ್ರದಾಯಿಕ ಔಷಧಿ ಪದ್ದತಿಯನ್ನು ನಾಶಪಡಿಸಿದ್ದೇವೆ. ಅದನ್ನು ಪುನರುಜ್ಜೀವನಗೊಳಿಸಬೇಕಾಗಿದೆ. ಅದಕ್ಕಾಗಿಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಯುಷ್ಯ ಮಂತ್ರಾಲಯಕ್ಕೆ ಅತೀ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದಾರೆ. ಅಲೋಪಥಿಗೆ ಪರ್ಯಾಯವಾಗಿ ಹೊಮಿಯೋಪಥಿ ಬೆಳೆದಿದೆ. ಆದರೆ ಆಯುರ್ವೇದ ಹಿಂದೆ ಬಿದ್ದಿದೆ. ಆದ್ದರಿಂದ ಆಯುರ್ವೇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವದಕ್ಕಾಗಿ ದೇಶದ್ಯಾಂತ ಕೆಎಲ್ಇ ಆಯುರ್ ಔಷಧಾಲಯವನ್ನು ತೆರೆಯಲಾಗುತ್ತಿದೆ ಎಂದು ಹೇಳಿದರು.

1938ರಲ್ಲಿ ಪ್ರಾರಂಭಿಸಲಾದ ಆಯುರ್ವೇದ ಫಾರ‍್ಮಸಿಗಾಗಿ ಅವಶ್ಯವಿರುವ ಗಿಡಮೂಲಿಕೆಗಳನ್ನು ಬಂಬರಗಾ ಗ್ರಾಮದ ಸುಮಾರು 16 ಎಕರೆ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಅದೇ ಪ್ರದೇಶದಲ್ಲಿ ಬೃಹತ್ತಾದ ಆಯುರ್ ಫಾರ‍್ಮಾ ಹಾಗೂ ಸಂಶೋಧನಾ ಕೇಂದ್ರ ತಲೆ ಎತ್ತಲಿದೆ. ಪಶ್ಚಿಮ ಘಟ್ಟದಲ್ಲಿ ಸಾಕಷ್ಟು ಆಯುರ್ವೇದಿಕ ಗಿಡಮೂಲಿಕೆಗಳಿದ್ದು, ಅವುಗಳ ಸಂಶೋಧನೆಗಾಗಿ ಕೆಎಲ್‌ಇ ಸಂಸ್ಥೆಯ ಬಿ ಎಂ ಕಂಕಣವಾಡಿ ಆಯುರ್ವೇದಿಕ್ ಮಹಾವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿದ್ದು, ಅದರೊಂದಿಗೆ ಜೊತೆಗೂಡಿ ಆಯುರ್ವೇದ ಅಭಿವೃದ್ದಿ ಹಾಗೂ ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ. ನಮ್ಮ ಪಾರಂಪರಿಕ ಔಷಧಿ ಪದ್ದತಿಗೂ ಕೂಡ ಮಹತ್ವ ನೀಡಬೇಕು ಎಂದು ಕರೆ ನೀಡಿದರು.

ಬಿ ಎಂ ಕಂಕಣವಾಡಿ ಆಯುರ್ವೇದಿಕ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಸುಹಾಸಕುಮಾರ ಶೆಟ್ಟಿ ಅವರು ಮಾತನಾಡಿ, ಕೆಎಲ್ ಇ ಆಯುರ್ ಫಾರ‍್ಮದಲ್ಲಿ 326 ತರಹದ ಔಷಧಗಳನ್ನು ತಯಾರಿಸುತ್ತಿದ್ದು, ಅದರಲ್ಲಿ 26 ಸಾಂಪ್ರದಾಯಿಕವಾದ ರೋಗತಡೆಗಟ್ಟುವ ಆಯುರ್ವೇದ ಪದ್ದತಿಯ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಉತ್ಪನ್ನಗಳನ್ನು ಮಾರಾಟ ಮಾಡುವ ಮೊದಲು ಆಯುಷ್ಯ ಪ್ರಮಾಣೀಕೃತ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಲ್ಪಡಿಸಲಾಗುತ್ತದೆ. ಉತ್ತಮ ಗುಣಮಟ್ಟ ಮತ್ತು ಪರಿಣಾಮಕಾರಿಯನ್ನು ಖಾತ್ರಿಪಡಿಸಿ ಅದನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುತ್ತದೆ. ಹರ್ಬಲ್ ಚಹಾ( ಟೀ) ಚವನಪ್ರಾಶ, ಸುವರ್ಣಬಿಂದು ಪ್ರಾಶಣ, ಕಾಸ್ಟಧೂಪ, ಹಲ್ಲಿನ ಪುಡಿ, ಬೃಂಗರಾಜ ಎಣ್ಣೆ, ದುಗ್ದರ‍್ಧಿನಿ ಸೇರಿದಂತೆ ಅನೇಕ ಆಯುರ್ವೇದ ಔಷಧಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ, ಹೆಚ್ ಬಿ ರಾಜಶೇಖರ, ಡಾ. ವಿ ಡಿ ಪಾಟೀಲ, ಡಾ. ಎನ್ ಎಸ್ ಮಹಾಂತಶೆಟ್ಟಿ, ಡಾ. ಆರಿಫ್ ಮಾಲ್ದಾರ, ಡಾ. ಸುನೀಲ ಜಲಾಲಪುರೆ, ಡಾ. ಪಿ ಜಿ ಜಾಡರ, ಡಾ. ಸವಿತಾ ಭೊಸಲೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ನವಜಾತ ಶಿಶುವನ್ನು ಪ್ಲಾಸ್ಟಿಕ್ ನಲ್ಲಿ ಕಟ್ಟಿ ಮರದಲ್ಲಿ ಇಟ್ಟಿದ್ದ ಪ್ರಕರಣ; ಕರ್ಮಕಾಂಡ ಬಯಲು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button