ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಲ್.ಇ ಕ್ಯಾನ್ಸರ್ ಆಸ್ಪತ್ರೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಿದರು.
ಗ್ರಾಮೀಣ ಮತ್ತು ಅರೆ ಗ್ರಾಮೀಣ ಪ್ರದೇಶಗಳಲ್ಲಿ ಶೇ.50ಕ್ಕಿಂತ ಹೆಚ್ಚು ಸಂಸ್ಥೆಗಳನ್ನು ಸ್ಥಾಪಿಸಿರುವ ಕೆಎಲ್ಇ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ರಾಷ್ಟ್ರಕ್ಕೆ ಸಂಸ್ಥೆ ದೊಡ್ಡ ಕೊಡುಗೆ ನೀಡಿದೆ ಎಂದು ರಾಷ್ಟ್ರಪತಿಗಳು ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಕೆಎಲ್ಇ ಸಂಸ್ಥೆ ಕಟ್ಟಿ ಬೆಳೆಸಿದ ಸಪ್ತರ್ಷಿಗಳು ಮತ್ತು ಡಾ.ಪ್ರಭಾಕರ ಕೋರೆ ಅವರ ಶ್ರಮ ಶ್ಲಾಘನೀಯ ಎಂದರು.
ಕಕೇಂದ್ರ ಸರಕಾರ ಗ್ರಾಮೀಣ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಹಣ ಮೀಸಲಿಟ್ಟಿದೆ ಎಂದೂ ಅವರು ಹೇಳಿದರು.
ಚೇರಮನ್ ಡಾ.ಪ್ರಭಾಕರ ಕೋರೆ ಮಾತನಾಡಿ, 310 ಸಂಸ್ಥೆಗಳನ್ನು ಹೊಂದಿರುವ ಕೆಎಲ್ಇ ಸಂಸ್ಥೆ ಮುಖ್ಯವಾಗಿ ಬಡವರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುತ್ತಿದೆ. 4 ಸಾವಿರಕ್ಕೂ ಹೆಚ್ಚು ಹಾಸಿಗೆಗಳ ಆಸ್ಪತ್ರೆ ಹೊಂದಿದ್ದು, ಬಡವರಿಗಾಗಿಯೇ ಸಾವಿರ ಹಾಸಿಗೆ ಆಸ್ಪತ್ರೆ ಸ್ಥಾಪಿಸಲಾಗಿದೆ. ಕ್ಯಾನ್ಸರ್ ಆಸ್ಪತ್ರೆ 300 ಹಾಸಿಗೆಗಳನ್ನು ಹೊಂದಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಸ್ಥೆಗಳನ್ನು ಸ್ಥಾಪಿಸಲಾಗಿದ್ದು, ಹಲವಾರು ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಂವಲಗ್ನ ಹೊಂದಿದೆ. ಸಂಸ್ಥೆ ಇಂದು ವಿಶ್ವದಲ್ಲೇ ಹೆಸರು ಮಾಡಿದೆ ಎಂದು ಅವರು ಹೇಳಿದರು.
ಈ ವೇಳೆ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ಸಂಸದ ಜಗದೀಶ್ ಶೆಟ್ಟರ್, ಕೆಎಲ್ಇ ಅಧ್ಯಕ್ಷ ಮಹಾಂತೇಶ ಕೌಜಲಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ