*1.64 ಕೆಜಿ ತೂಕದ ಬೃಹತ್ ಗರ್ಭಾಶಯದ ಗಡ್ಡೆ ತೆಗೆದ ಕೆಎಲ್ಇ ವೈದ್ಯರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಯಳ್ಳೂರು ರಸ್ತೆಯಲ್ಲಿರುವ ಕೆಎಲ್‌ಇ ಸೆಂಟಿನರಿ ಚಾರಿಟೇಬಲ್ ಆಸ್ಪತ್ರೆಯಲ್ಲಿ 41 ವರ್ಷದ ಮಹಿಳೆಯ ಗರ್ಭಾಶಯದಲ್ಲಿದ್ದ ಬರೋಬ್ಬರಿ 1.64 ಕೆಜಿ ತೂಕದ ಬೃಹತ್ ಗಡ್ಡೆಯನ್ನು ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ತೆರವುಗೊಳಿಸಲಾಗಿದೆ. ಮಹಿಳೆಯು ಹಲವು ದಿನಗಳಿಂದ ಹೊಟ್ಟೆ ನೋವು ಸೇರಿದಂತೆ ವಿವಿಧ ದೈಹಿಕ ಸಮಸ್ಯೆಗಳಿಂದ ಬಳಲುತ್ತಿದ್ದರು. ಹೊಟ್ಟೆಯ ಭಾಗದಲ್ಲಿ ಗಡ್ಡೆ ದೊಡ್ಡದಾಗುತ್ತಾ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಬಳಿಕ ಗಡ್ಡೆಯ ಗಾತ್ರ ಮತ್ತು ರೋಗಿಯ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಶಸ್ತ್ರಚಿಕಿತ್ಸೆ ನಡೆಸಲು … Continue reading *1.64 ಕೆಜಿ ತೂಕದ ಬೃಹತ್ ಗರ್ಭಾಶಯದ ಗಡ್ಡೆ ತೆಗೆದ ಕೆಎಲ್ಇ ವೈದ್ಯರು*