*ಕೆಎಲ್ ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ 16ನೇ ಲಿವರ್ ಕಸಿ ಯಶಸ್ವಿ: ಸಾವು -ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಗೆ ಮರುಜೀವ*


ಪ್ರಗತಿವಾಹಿನಿ ಸುದ್ದಿ: ಅನೇಕ ವರ್ಷಗಳಿಂದ ಲಿವರ್ ವೈಫಲ್ಯದಿಂದ ಬಳಲುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಯಾದಗಿರಿಯ ೪೭ ವರ್ಷದ ವ್ಯಕ್ತಿಯೋರ್ವನಿಗೆ ಲೀವರ್ ಕಸಿ ಮಾಡುವದರ ಮೂಲಕ ರೋಗಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಲ್ಲದೇ ಉತ್ತರ ಕರ್ನಾಟಕದಲ್ಲಿಯೇ ೧೬ನೇ ಯಶಸ್ವಿ ಯಕೃತ್ತಿ (ಲಿವರ್)ನ ಕಸಿ ಮಾಡುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯರು ಯಶಸ್ವಿಯಾಗಿದ್ದಾರೆ.
ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವನ ಬಾಗೇವಾಡಿಯ ನಿವಾಸಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಚಾಲಕ ೪೫ ವರ್ಷದ ಬಸಪ್ಪ ಹೊನವಾಡ ಅವರು ಮೆದುಳು ನಿಷ್ಕ್ರಿಯಗೊಂಡು, ತನ್ನ ಕಾರ್ಯವನ್ನು ನಿಲ್ಲಿಸಿದಾಗ ಕುಟುಂಬ ಸದಸ್ಯರೊಂದಿಗೆ ಆಪ್ತಸಮಾಲೋಚನೆ ಮಾಡಿದಾಗ ಲೀವರ್ ದಾನ ಮಾಡಿದರು. ದಾನ ಮಾಡಿದ ಯಕೃತ್(ಲಿವರ್)ನ್ನು ಗ್ಯಾಸ್ಟ್ರೋಎಂಟ್ರಾಲಾಜಿ ಮತ್ತು ಹೆಪಟಾಲಾಜಿ ಹಿರಿಯ ತಜ್ಞವೈದ್ಯರಾದ ಡಾ. ಸಂತೋಶ ಹಜಾರೆ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸಾ ತಜ್ಞವೈದ್ಯರಾದ ಡಾ. ಸುದರ್ಶನ ಚೌಗಲಾ ಅವರು ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದರು
ಯಕೃತ್ ಕಸಿ ಮಾಡಿಸಿಕೊಂಡು ವ್ಯಕ್ತಿಯು ಈಗ ಸಂಪೂರ್ಣ ಗುಣಮುಖಗೊಂಡು ಆಸ್ಪತ್ರೆಯಿಂದ ಮರಳಿ ಮನೆಗೆ ತೆರಳುತ್ತಿದ್ದಾರೆ. ಅತ್ಯಾಧುನಿಕ ವೈದ್ಯಕೀಯ ಸಲಕರಣೆ ಹಾಗೂ ಲಿವರ್ ಕಸಿ ಕೇಂದ್ರವಾಗಿ ಉತ್ತರ ಕರ್ನಾಟಕ, ಮಹಾರಾಷ್ಟತರ ಹಾಗೂ ಗೋವಾ ರಾಜ್ಯಗಳ ಜನತೆಗೆ ಆಶಾಕಿರಣವಾಗಿ ಹೊರಹೊಮ್ಮಿದೆ. ಕೇವಲ ಮೆಟ್ರೊ ನಗರಗಳಿಗೆ ಸೀಮಿತವಾಗಿದ್ದ ಲೀವರ ಕಸಿ ಶಸ್ತçಚಿಕಿತ್ಸೆಗಳನ್ನು ಅವಶ್ಯವಿರುವ ರೋಗಿಗಳಿಗೆ ಕೈಗೆಟಕುವ ದರದಲ್ಲಿ ನೀಡಲಾಗುತ್ತಿದೆ. ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯು ಲೀವರ್ ನೊಂದಿಗೆ, ನೇತ್ರ ಹಾಗೂ ಕಿಡ್ನಿ ದಾನ ಮಾಡಿದರು ಎಂದು ಹಿರಿಯ ಗ್ಯಾಸ್ಟ್ರೋಎಂಟ್ರಾಲಾಜಿಸ್ಟ ಡಾ. ಸಂತೋಷ ಹಜಾರೆ ಅವರು ಹೇಳಿದ್ದಾರೆ.
ಯಶಸ್ವಿ ಯಕೃತ ಕಸಿ ನೆರವೇರಿಸಿದ ಆಸ್ಪತ್ರೆಯ ವೈದ್ಯರ ತಂಡ ಹಾಗೂ ಲೀವರ ದಾನಿಯ ಕುಟುಂಬವನ್ನು ಕೆಎಲ್‌ಇ ಸಂಸ್ಥೆಯ ಕರ‍್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ ಅವರು ಅಭಿನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ