Kannada NewsKarnataka NewsLatest

ರಾಷ್ಟ್ರೀಯ ಸ್ಪರ್ಧೆಯಲ್ಲಿ KLS ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹರಿಯಾಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಕಾಲೇಜು ವಿದ್ಯಾರ್ಥಿಗಳು ಸ್ಕೂಲ್ ಆಫ್ ಲೀಗಲ್ ಸ್ಟಡೀಸ್ ಕೆ ಆರ್ ಮಂಗಳಂ ವಿಶ್ವವಿದ್ಯಾಲಯ ಹರಿಯಾಣ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾರತದಾದ್ಯಂತ 22 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು, ಆರ್ ಎಲ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ  ರವಿಚಂದ್ರನಗೌಡ ಪಾಟೀಲ, ಎಂಎಸ್ ಉಜ್ವಲಾ ಹವಾಲ್ದಾರ್ ಮತ್ತು ಎಂಎಸ್ ಸಮೀಕ್ಷಾ ಮಾದಾಯಿಕ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದರು.

ಕರ್ನಾಟಕ ಕಾನೂನು ಸಂಸ್ಥೆ ಅಧ್ಯಕ್ಷ ಅನಂತ ಮಂಡಗಿ, ಚೇರ್ಮನ್ ಪಿ.ಎಸ್.ಸಾವ್ಕರ್, ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಆರ್.ಕುಲಕರ್ಣಿ, ಪ್ರಾಚಾರ್ಯ ಎ.ಎಚ್.ಹವಾಲ್ದಾರ್, ಮೂಟ್ ಕೋರ್ಟ್ ವಿಭಾಗದ ಕೋ-ಆರ್ಡಿನೇಟರ್ ಪ್ರೊ.  ಅಶ್ವಿನಿ ಪರಬ್ ಮತ್ತು ಇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು  ಭಾಗವಹಿಸಿದವರನ್ನು ಅಭಿನಂದಿಸಿದರು.

 

Home add -Advt

For English News –

Related Articles

Back to top button