ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್, ಸಹಕಾರಿ ಯೂನಿಯನ್ ನಿರ್ದೇಶಕರ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಶನಿವಾರ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್, ಸಹಕಾರಿ ಯೂನಿಯನ್ ನಿರ್ದೇಶಕರ ಸಭೆ ನಡೆಸಿದರು.
ಬೆಳಗಾವಿಯ ಖಾಸಗಿ ಹೊಟೇಲ್ನಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು.
ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ ನಡುವಿನ ಚುನಾವಣೆಯಾಗಿದೆ. ಕೆಲವರು ಈ ಚುನಾವಣೆಗೆ ಏನೇನೋ ಬಣ್ಣ ಬಳಿಯುತ್ತಿದ್ದಾರೆ. ಇದು ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಪಕ್ಷ-ಪಕ್ಷಗಳ ಮಧ್ಯೆ ಚುನಾವಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸಬೇಕು. ಅದರಂತೆ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು ಎಂದು ಅವರು ಕರೆ ನೀಡಿದರು.
ಮಹಾಂತೇಶ ಕವಟಗಿಮಠ ಅವರ ಗೆಲುವಿಗೆ ಎಲ್ಲ ಕಾರ್ಯಕರ್ತರು ಪ್ರಯತ್ನಿಸಬೇಕು. ಈ ಚುನಾವಣೆಯಲ್ಲಿ ಕಾಂಗ್ರೇಸ್ ಸೋತರೆ ಮಾತ್ರ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಅನುಕೂಲವಾಗಲಿದೆ. ಆದ್ದರಿಂದ ಎಲ್ಲ ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ನೇರವಾಗಿ ಸಂಪರ್ಕ ಮಾಡಿಕೊಂಡು ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ್ ಪಾಟೀಲ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ(ಮೆಳವಂಕಿ) ಹಾಗೂ ದಿಗ್ಧರ್ಶಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ಚುನಾವಣೆ ಆಖಾಡಕ್ಕೆ ಡಿ.ಕೆ.ಶಿವಕುಮಾರ ಎಂಟ್ರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ