
ಪ್ರಗತಿವಾಹಿನಿ ಸುದ್ದಿ: ಶಾಲೆಯ ಆವರಣದಲ್ಲಿದ್ದ ವಸ್ತುವನ್ನು ಸ್ಫೋಟಕ ಎಂದು ತಿಳಿಯದೇ 10 ವರ್ಷದ ಬಾಲಕನೊಬ್ಬ ಬಿಸಾಕಿದ್ದು, ಅದು ಏಕಾಏಕಿ ಸ್ಫೋಟಗೊಂಡ ಘಟನೆ ನಡೆದಿದೆ.
ಕೇರಳದ ಪಾಲಕ್ಕಾಡ್ ಜಿಲ್ಲೆಯ ವಡಕ್ಕಂತರಾದಲ್ಲಿ ಈ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಬಿದ್ದಿದ್ದ ವಸ್ತುವನ್ನು ಬಾಲಕ ಎತ್ತಿ ಬಿಸಾಕಿದ್ದಾನೆ ಏಕಾಏಕಿ ಸ್ಫೋಟಗೊಂಡ ಪರಿಣಾಮ ಬಾಲಕ ಹಾಗೂ ಮಹಿಳೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ನಡೆಸಿರುವ ಪ್ರಾಥಮಿಕ ತನಿಖೆಯಲ್ಲಿ ಶಾಲೆಯ ಬಳಿ ಕೆಲ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಅಪಾಯಕಾರಿ ಸ್ಫೋಟಕ ವಸ್ತುಗಳು ಎಂದು ತಿಳಿಸಿದ್ದಾರೆ.