ನಂದಿನಿ ಹಾಲು, ಮೊಸರಿನ ದರ ಏರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಂದಿನಿ ಹಾಲು ಹಾಗೂ ಮೊಸರಿನ ದರ ಹೆಚ್ಚಳ ಮಾಡಲಾಗಿದ್ದು, ದರ ಹೆಚ್ಚಿಸುವ ಕುರಿತು ಸಲ್ಲಿಸಲಾಗಿದ್ದ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಕೆಎಂಎಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ನಂದಿನಿ ಹಾಲಿನ ದರ ಹೆಚ್ಚಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರು ಹೆಚ್ಚಿನ ಲಾಭ ನೀಡುವಂತೆ ಒತ್ತಾಯಿಸಿ ಬೇಡಿಕೆ ಇಡುತ್ತಿದ್ದರು. ಈ ನಿಟ್ಟಿನಲ್ಲಿ ನಂದಿನಿ ಬ್ರ್ಯಾಂಡ್‌ನಲ್ಲಿ ಹಾಲು, ಮೊಸರು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕೆಎಂಎಫ್‌ ಹಾಲಿನ ದರ ಏರಿಕೆ ಮಾಡುವಂತೆ ರಾಜ್ಯ ಸರಕಾರದ ಮುಂದೆ ಪ್ರಸ್ತಾವನೆ ಇಟ್ಟಿತ್ತು. ಇದಕ್ಕೆ ರಾಜ್ಯ ಸರಕಾರ ಒಪ್ಪಿಗೆ ನೀದಿದೆ. ಪರಿಷ್ಕೃತ ದರ ಫೆ.1ರಿಂದ ಜಾರಿಗೆ ಬರಲಿದ್ದು, ಪ್ರತಿ ಲೀಟರ್​ಗೆ ಹಾಲಿಗೆ 2 ರೂ ಏರಿಕೆಯಾಗಲಿದೆ ಎಂದು ತಿಳಿಸಿದರು.

14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್ ಗೆ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರತೀ ಲೀಟರ್ ಗೆ ಎರಡರಿಂದ ಮೂರು ರೂ ಹೆಚ್ಚಳ ಮಾಡುವಂತೆ ಬೇಡಿಕೆ ಬಂದಿತ್ತು. ಈ ಕುರಿತು ಆಡಳಿತ ಮಂಡಳಿ ಸಭೆಯಲ್ಲಿ ಕೂಡ ಚರ್ಚಿಸಿ ತೀರ್ಮಾನ ಕೈ ಗೊಳ್ಳಲಾಗಿತ್ತು. ಆದರೆ ಸರ್ಕಾರ 2 ರೂ ಏರಿಕೆಗೆ ಅನುಮತಿ ನೀಡಿದೆ. ಇದರ ಜೊತೆಗೆ ಮೊಸರಿನ ದರವನ್ನು ಕೂಡ 2 ರೂ ಏರಿಸಲಾಗಿದೆ ಎಂದು ಹೇಳಿದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button