ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸಂಕಷ್ಟಗಳ ನಡುವೆಯೇ ಕೆಎಂಎಫ್ ಹಾಲಿನ ದರ ಏರಿಕೆ ಮಾಡಲು ನಿರ್ಧರಿಸಿದೆ. ಲೀಟರ್ ಹಾಲಿನ ದರ 2 ರೂಪಾಯಿ ಏರಿಕೆ ಮಾಡಲು ಕೆ ಎಂ ಎಫ್ ಚಿಂತನೆ ನಡೆಸಿದೆ.
ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕರ್ನಾಟಕ ಹಾಲು ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡುವ ಸಂಬಂಧ ಪ್ರಸ್ತಾಪ ಮಾಡಲಾಗಿದ್ದು ಒಕ್ಕೂಟಗಳ ಜೊತೆ ಸಭೆಯ ಬಳಿಕ ಸಿಎಂ ಜತೆ ಚರ್ಚಿಸುವುದಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ನಂದಿನಿ ಹಾಲಿನ ದರ ಕಡಿಮೆಯಿದೆ. ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಕೆಎಂಎಫ್ ಅಧ್ಯಕ್ಷರಿಗೆ ಮನವಿ ಮಾಡಿದೆ ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಲು ತೀರ್ಮಾನಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ